4:46 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಪತಿಯ ಹಾದಿ ಹಿಡಿದ ಪತ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಧ್ರುವನಾರಾಯಣ್ ಪತ್ನಿ ವೀಣಾ ಇನ್ನಿಲ್ಲ

07/04/2023, 13:40

ಮೈಸೂರು(reporterkarnataka.com):
ಹೃದಯಾಘಾತದಿಂದ ಇತ್ತೀಚಿಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಅವರ ಪತ್ನಿ ವೀಣಾ(50) ಅನಾರೋಗ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಬ್ರೈನ್ ಟ್ಯೂಮರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು.
ವೀಣಾ ಅವರು ದಿ.ಧ್ರುವನಾರಾಯಣ್ ಅವರ ಅಕ್ಕನ ಮಗಳು. ಧ್ರುವ ನಾರಾಯಣ್ ಮೃತಪಟ್ಟ ಸ್ವಲ್ಪ ದಿನಗಳಲ್ಲೇ ಪತ್ನಿ ನಿಧನರಾಗಿರುವುದು ಪುತ್ರ ದರ್ಶನ್ ಧ್ರುವ ನಾರಾಯಣ್ ಅವರಿಗೆ ಮತ್ತೊಂದು ಆಘಾತ ಉಂಟು ಮಾಡಿದೆ.

ದರ್ಶನ್ ಅವರು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಂದೆಯನ್ನು ಕಳೆದುಕೊಂಡಿರುವ ದುಃಖದಲ್ಲಿದ್ದ ಅವರು ಅದರಿಂದ ಚೇತರಿಸಿಕೊಳ್ಳುವ ಮುನ್ನವೇ
ತಾಯಿಯನ್ನು ಕಳೆದುಕೊಂಡಿದ್ದಾರೆ.
ದರ್ಶನ್ ತಮ್ಮ ಧೀರನ್ ತಾಯಿಯ ಆರೈಕೆ ನೋಡಿಕೊಳ್ಳುತ್ತಿದ್ದರು. ಮೃತ ವೀಣಾ ಅವರ ಅಂತ್ಯಕ್ರಿಯೆ ಹೆಗ್ಗವಾಡಿ ಗ್ರಾಮದಲ್ಲಿ ಶನಿವಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು