4:12 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ದಿನಕ್ಕೆ ಎಷ್ಟು ಸ್ವ್ಯಾಬ್ ಸಂಗ್ರಹವಾಗುತ್ತಿದೆ ಎನ್ನುವುದೇ ಗೊತ್ತಿಲ್ಲ !:ಆರೋಗ್ಯ ಇಲಾಖೆಯ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಗರಂ

24/05/2021, 21:54

ಮಂಗಳೂರು (reporterkarnataka news): ಜಿಲ್ಲಾ ಆರೋಗ್ಯ ಇಲಾಖೆ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಗರಂ ಆಗಿದ್ದಾರೆ. ದಿನಕ್ಕೆ ಎಷ್ಟು ಸ್ವ್ಯಾಬ್ ಸಂಗ್ರಹವಾಗುತ್ತಿದೆ.?ಯಾವ ಯಾವ ಆರೋಗ್ಯ ಕೇಂದ್ರಗಳಲ್ಲಿ ಎಷ್ಟೆಷ್ಟು ಸಂಗ್ರಹಿಸಲಾಗುತ್ತಿದೆ ? ಅವುಗಳನ್ನು ಯಾವಾಗ ಪರೀಕ್ಷೆಗೆ ಕಖುಹಿಸಿಕೊಡಲಾಗುತ್ತದೆ ಎಂದು ಕೇಳಿದರೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಬಳಿ ಯಾವುದೇ ಮಾಹಿತಿ ಇಲ್ಲ

ನಗರದ ಜಿಲ್ಲಾ ಪಂಚಾಯತ್‍ನ ಕೆಸ್ವಾನ್ ವೀಡಿಯೋ ಕಾನ್ಫ್‍ರೆನ್ಸ್ ಹಾಲ್‍ನಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಸೋಮವಾರ ಅಧಿಕಾರಿಗಳೊಂದಿಗೆ  ನಡೆದ ಸಭೆಯಲ್ಲಿ ಈ ಘಟನೆ ನಡೆಯಿತು.

ಪ್ರತಿದಿನ ಸ್ವ್ಯಾಬ್ ಎಷ್ಟು ಸಂಗ್ರಹವಾಗುತ್ತಿದೆ. ಯಾವ ಯಾವ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಷ್ಟು ಸಂಗ್ರಹವಾಗುತ್ತಿದೆ. ಅವುಗಳ ಪರೀಕ್ಷೆ ಯಾವಾಗ ಆಗುತ್ತಿದೆ ಎಂಬ ಉಸ್ತುವಾರಿ ಕಾರ್ಯದರ್ಶಿಗಳ ಪ್ರಶ್ನೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮರ್ಪಕ ಉತ್ತರ ನೀಡದೇ ಇರುವ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದ ಅವರು, ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಖರ ಮಾಹಿತಿಯನ್ನು ಹೊಂದುವುದರೊಂದಿಗೆ ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.

ದೈನಂದಿನ ಸ್ವ್ಯಾಬ್ ಸಂಗ್ರಹ, ಅವುಗಳ ರವಾನೆ, ಪರೀಕ್ಷೆಯ ಫಲಿತಾಂಶ ನಂತರದಲ್ಲಿ ಸೋಂಕು ದೃಢಪಟ್ಟವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಸ್ವ್ಯಾಬ್ ಸಂಗ್ರಹ ಅವುಗಳ ಪರೀಕ್ಷೆಗಳನ್ನು ತ್ವರಿತಗತಿಯಲ್ಲಿ ಕೈಗೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಿದಾಗ ಮಾತ್ರ ಕೋರೊನಾ ಸೋಂಕು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಈ ಕಾರ್ಯವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರುತ್ವರಿ ತಗತಿಯಲ್ಲಿ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೆಳ ಹಂತದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಮೇಲ್ವಿಚಾರಣೆಯನ್ನು ತಪ್ಪದೇ ಮಾಡಬೇಕು. ಕೆಲವೊಮ್ಮೆ ಸರಿಯಾಗಿ ಕಾರ್ಯನಿರ್ವಹಿಸದಿದ್ದಲ್ಲಿ ಅವರುಗಳಿಗೆ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಸೋಂಕು ದೃಢಪಟ್ಟು ಗುಣಲಕ್ಷಣ ಹೊಂದಿಲ್ಲದ ಹಾಗೂ ಹೊಂದಿರುವ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು. ಅವಶ್ಯವಿದ್ದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ವರ್ಗಾಯಿಸಬೇಕು, ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಆಪೇಕ್ಷಿಸಿದಲ್ಲಿ ಅವರಿಗೆ ಪ್ರತ್ಯೇಕವಾಗಿರಲು ಸೂಚನೆ ನೀಡುವುದರ ಜೊತೆಗೆ ವೈದ್ಯರು ಪ್ರತಿದಿನ ಅವರುಗಳ ಆರೋಗ್ಯದ ಸ್ಥಿತಿಗತಿಗಳನ್ನು ಪೋನ್ ಕರೆ ಮಾಡುವುದರೊಂದಿಗೆ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ಹೊಂದಲು ಸಲಹೆ ನೀಡಬೇಕು ಎಂದು ಸೂಚನೆ ನೀಡಿದರು.
ಪ್ರತೀ ಗ್ರಾಮಗಳಲ್ಲಿ ಹಾಗೂ ವಾರ್ಡ್‍ಗಳಲ್ಲಿ ಸೋಂಕಿತರ ಸಂಪರ್ಕ ಹೊಂದಿದವರ ಗುರುತಿಸುವ ಕಾರ್ಯವನ್ನು ಶಾಲಾ ಶಿಕ್ಷಕಿಯರು ಮಾಡುತ್ತಿದ್ದು, ಇವುಗಳ ಮೇಲ್ವಿಚಾರಣೆಯನ್ನು ಪ್ರತೀದಿನ ತಹಶೀಲ್ದಾರರುಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಡಬೇಕು ಎಂದರು.
ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿಮಾತನಾಡಿ, ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಕೊರೋನಾ ಪರೀಕ್ಷೆಯನ್ನು ಮಾಡಲು ಮೊಬೈಲ್, ಸ್ವ್ಯಾಬ್ ಸಂಗ್ರಹ, ವಾಹನಗಳನ್ನು ನಿಯೋಜಿಸಲಾಗಿದೆ. ಕೆಲವೊಮ್ಮೆ ಕೊರೋನಾ ಪರೀಕ್ಷೆಗೆ ಬರಲು ಆಗದೆ ಇದ್ದವರನ್ನು ಅವರ ಮನೆಗಳಿಗೆ ಹೋಗಿ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು