6:17 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಚಾಲನೆ

05/03/2025, 22:12

ಬೆಳ್ತಂಗಡಿ(reporterkarnataka.com): ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಮಾ.3ರಂದು ನಡೆದ ಡೈಮಂಡ್ ಫೆಸ್ಟ್ ಚಾಲನೆ ನೀಡಿ ಮಾತನಾಡಿದರು.
ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80ರ ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭರಣಗಳಲ್ಲಿ ಉತ್ತಮ ಗುಣಮಟ್ಟ ಮತ್ತು ಶುದ್ದತೆಯನ್ನು ಕಾಪಾಡುತ್ತ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ರ್ಮಾಕೆಟಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ, ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿದರು. ಅಶ್ವಥ್ ವಂದಿಸಿದರು. ಕನ್ನಿಕಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು