3:00 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

04/09/2024, 17:14

ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸುಗಳು ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಎಲ್ಲೂ ನಿಲ್ಲಿಸದೆ ಬಲಬದಿಯಲ್ಲೇ ಹೋಗಬೇಕು ಎಂದು ಸೂಚನೆ ನೀಡಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಲೇಡಿಗೋಗಶನ್ ಬಳಿಯ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಬಸ್ ಹತ್ತದಂತಾಗಿದೆ ಎಂದು ಅವರು ನುಡಿದರು.
ಸಂಚಾರ ಬದಲಾವಣೆ ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಕೇಳುವ ಸೌಜನ್ಯ ಕೂಡ ತೋರಿಸಲಿಲ್ಲ. ಹಲವು ಕಡೆ ಯೂ ಟರ್ನ್ ಗಳನ್ನು ಬಂದ್ ಮಾಡಲಾಗಿದೆ. ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಹಂಪನಕಟ್ಟೆಯ ವಿವಿ ಕಾಲೇಜು ಮುಂಭಾಗದಲ್ಲಿರುವ ಬಸ್ ನಿಲ್ದಾಣವನ್ನು ಕೇವಲ ಒಬ್ಬ ವ್ಯಕ್ತಿಯ ಅಂಗಡಿ ವ್ಯಾಪಾರದ ಉದ್ದೇಶಕ್ಕಾಗಿ ಯಾವುದೇ ಮಾಹಿತಿ ನೀಡದೆ ರಾತೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಬಿಸಿಲು ಮಳೆಗೆ ನಿಲ್ಲುವಂತಾಗಿದೆ. ಇಲ್ಲಿ ಕೂಡ ಕಾಂಗ್ರೆಸ್ ನಾಯಕರ ಒತ್ತಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೌಖಿಕ ಆದೇಶದ ಮಾತು ಕೇಳಿ ಬರುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ವಿಘ್ನ ವಿನಾಯಕನಿಗೆ ವಿಘ್ನ ತರುವಂತೆ ಮಾಡು ಕಾರ್ಯದಲ್ಲಿ ತೊಡಗಿದೆ. ಸರಕಾರ ಸಾರ್ವಜನಿಕ ಗಣೇಶೋತ್ಸವ ಆಯೋಜಕರಿಗೆ ಹೊಸ ನಿಯಮದ ಮೂಲಕ ವಿಘ್ನ ತರುವ ಕಾರ್ಯ ಮಾಡಿದೆ.ಕಾರ್ಯಕ್ರಮಕ್ಕೆ ಬರುವ ಅತಿಥಿ ಗಳ ಮೊಬೈಲ್ ಸಂಖ್ಯೆ, ಹೆಸರುಗಳು ನೀಡುವಂತೆ ಒತ್ತಡ ಹೇರಿದೆ.
ಇನ್ನೂ ಶೋಭಾಯಾತ್ರೆ ಭಾಗವಹಿಸುವ ವಾಹನ ಗಳ ದಾಖಲೆ ಪತ್ರ ಇನ್ನಿತರ ದಾಖಲೆ ನೀಡಬೇಕಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಹಿಂದೂ ಧಾರ್ಮಿಕತೆ ದಕ್ಕೆ ತಂದು ನಮ್ಮ ನಂಬಿಕೆಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು