3:21 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ದಿಲ್ಲಿ: ರಾಹುಲ್‌ ಗಾಂಧಿ ಸೇರಿದಂತೆ 18 ಮಂದಿ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

26/07/2022, 20:06

ಹೊಸದಿಲ್ಲಿ(reporterkarnataka.com):ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ 

ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿರುವ ಇಡಿ ಎರಡು ದಿನಗಳಿಂದ ಸೋನಿಯಾ ಗಾಂಧಿ ಅವರನ್ನೂ ವಿಚಾರಣೆ ನಡೆಸುತ್ತಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಹಾಗೂ ಪ್ರಮುಖ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಡಿ ಪ್ರಕರಣದ ಜತೆಗೆ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಸಂಸತ್‌ ಆವರಣದಿಂದ ವಿಜಯ್‌ ಚೌಕ್‌ವರೆಗೆ ನಡೆಸುತ್ತಿದ್ದ ಪಾದಯಾತ್ರೆಯನ್ನು ಪೊಲೀಸರು ತಡೆದಿದ್ದಾರೆ.

ಹಾಗಾಗಿ ಪೊಲೀಸರು ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ಮಾತಿನ ಚಕಮಕಿ ನಡೆದು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಂಧಿತರಲ್ಲಿ ದೀಪೇಂದರ್ ಹೂಡಾ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡ ಇದ್ದಾರೆ. ಪೊಲೀಸರ ಸೂಚನೆ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದು, ಬಂಧಿಸಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು