7:57 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ದಿಲ್ಲಿಗೆ ಶಿಫ್ಟ್ ಆದ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ: ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಇನ್ ಡೇಂಜರ್?

08/04/2023, 23:44

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಟಿಕೆಟ್ ಹಂಚಿಕೆ ಪ್ರಕ್ರಿಯೆ ರಾಜ್ಯದಿಂದ ದೆಹಲಿಗೆ ಶಿಫ್ಟ್ ಆಗಿದೆ. ಹಾಗೆ ಟಕೆಟ್ ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿನವರು ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಲ್ಲಿಗೆ ಹೋಗಿದ್ದಾರೆ. ಶುಕ್ರವಾರದಿಂದ ಆರಂಭಗೊಂಡ ಎರಡು ದಿನಗಳ ಸಂಸದೀಯ ಮಂಡಳಿಯ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ, ಅಳೆದು ತೂಗಿ ಟಿಕೆಟ್ ವಿತರಿಸಲು ಬಿಜೆಪಿ ನಿರ್ಧರಿಸಿದೆ.

ಗುಜರಾತ್ ಮಾದರಿ ಅನುಸರಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವುದು ಬಿಜೆಪಿಯ ಕಾರ್ಯತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ 75 ವರ್ಷ ವಯಸ್ಸಾದ ನಾಯಕರಿಗೆ ಹಾಗೂ ಈ ಬಾರಿ ಗೆಲ್ಲುವುದು ಕಷ್ಟ ಎಂದು ಅಂದಾಜಿಸಲಾದ ಸುಮಾರು 27 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಇದರಲ್ಲಿ ಹಾಲಿ ಸಚಿವರು ಕೂಡ ಸೇರಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಗೆ ಸೇರಿದ ಸಚಿವರು ಕೂಡ ಇದ್ದಾರೆ ಎನ್ನುವುದು ವಿಶೇಷವಾಗಿದೆ. ಅದೇ ರೀತಿ ಕರಾವಳಿಯ 3 ಜಿಲ್ಲೆಗಳಿಂದ 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ. ಇದರಲ್ಲಿ ದ.ಕ‌. ಜಿಲ್ಲೆಯ 3 ಮಂದಿ ಶಾಸಕರಿದ್ದಾರೆ ಎಂದು ತಿಳಿದು ಬಂದಿದೆ.

ಟಿಕೆಟ್ ಪಡೆಯಲು ಬಿಜೆಪಿ ಹಾಲಿ ಶಾಸಕರು ಏನೆಲ್ಲ ಕಸರತ್ತಿನಲ್ಲಿ ತೊಡಗಿದ್ದಾರೆ. ಆದರೆ ಯಾವುದೇ ಪ್ರಭಾವ ಬಿಜೆಪಿ ಹೈಕಮಾಂಡ್ ಮುಂದೆ ವರ್ಕ್ ಔಟ್ ಆಗೋಲ್ಲ. ಪಕ್ಷ ಆರೆಸ್ಸೆಸ್ ಮೂಲಕ ನಡೆಸಿದ ಆಂತರಿಕ ಸರ್ವೇ ವರದಿ ಪ್ರಕಾರವೇ ಟಿಕೆಟ್ ನೀಡಲು ಪಕ್ಷದ ಹೈಕಮಾಂಡ್ ತೀರ್ಮಾನಿಸಿದೆ. 2018ರ ಚುನಾವಣೆಯಲ್ಲಿ ಹೊಸ ಮುಖಗಳನ್ನು ಅಖಾಡಕ್ಕಿಳಿಸಿ ಯಶಸ್ವಿ ಕಂಡಿರುವ ಬಿಜೆಪಿ ಈ ಬಾರಿಯ ಚುನಾವಣೆಯಲ್ಲೂ ಅದೇ ತಂತ್ರಗಾರಿಕೆ ಅನುಸರಿಸಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು