7:53 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರಿಂದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಭೇಟಿ: ರಾಜಕೀಯ ವಲಯದಲ್ಲಿ ಮತ್ತೆ ತೀವ್ರ ಸಂಚಲನ

15/12/2023, 23:00

ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ನಡುವೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ದೇವೇಗೌಡ ಅವರು ಸಂಸತ್‌ ಭವನದಲ್ಲಿ ಖರ್ಗೆ ಅವರನ್ನು ಭೇಟಿಯಾಗಿ ಒಂದು ತಾಸಿಗೂ ಅಧಿಕ ಕಾಲ ಚರ್ಚೆ ನಡೆಸಿದರು. ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು ಎನ್ನಲಾಗಿದೆ.
ಉಭಯ ನಾಯಕರ ಭೇಟಿ ಕುರಿತು ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಈಗಾಗಲೇ ಅಂತಿಮ ಸಹಿ ಬಿದ್ದಿದೆ. ಕರ್ನಾಟಕದಲ್ಲಿ ಕೇವಲ ಸೀಟು ಹಂಚಿಕೆ ಮಾತ್ರ ಬಾಕಿ ಉಳಿದಿದೆ. ದೇವೇಗೌಡ ಅವರ ಪುತ್ರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇತ್ತೀಚೆಗೆ ಕಲ್ಲಡ್ಕಕ್ಕೆ ಭೇಟಿ ನೀಡಿದ್ದಾಗ ಆರೆಸ್ಸೆಸ್ ನಾಯಕ ಡಾ. ಪ್ರಭಾಕರ ಭಟ್ ಅವರೆದುರು ಬಿಜೆಪಿ ಸಿದ್ದಾಂತವನ್ನು ಒಪ್ಪಿಕೊಂಡಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಯ ನಂತರ ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿ ಮತ್ತು ಜೆಡಿಎಸ್ ಹೀನಾಯವಾಗಿ ಸೋಲುಂಡ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು