8:38 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಡರ್ಟಿ ಫಿಕ್ಚರ್ ಪ್ರಕರಣ: ಶಾಸಕ, ಜೆಡಿಎಸ್ ನಾಯಕ ರೇವಣ್ಣ ಅಂದರ್: ಮಾಜಿ ಪ್ರಧಾನಿ ದೇವೇಗೌಡರ ಮನೆಯಿಂದ ಬಂಧನ

04/05/2024, 20:41

ಬೆಂಗಳೂರು(reporterkarnataka.com): ಹಾಸನ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಎಚ್. ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್ ಐಟಿ)ದ ಪೊಲೀಸರು ಇಂದು ಬಂಧಿಸಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಅವರು ಸಲ್ಲಿಸಿದ
ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಎಸ್ ಐಟಿ ತಂಡ ರೇವಣ್ಣ ಅವರನ್ನು ಬಂಧಿಸಿದೆ. ಇದೀಗ ರೇವಣ್ಣ ಅವರನ್ನು ಎಸ್ ಐಟಿ ಪ್ರಧಾನ ಕಚೇರಿಗೆ ಕರೆದು ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು