ಇತ್ತೀಚಿನ ಸುದ್ದಿ
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ ಅಭಿಯಾನ
07/01/2026, 22:55
ಬೆಂಗಳೂರು(reporterkarnataka.com): ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಸದಸ್ಯರು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನವಕ್ಕೆ ಇಂದು ಚಾಲನೆ ನೀಡಿದರು. ಅಭಿಯಾನದ ಆರಂಭವನ್ನು ನಗರದ ಆರ್.ಸಿ. ಕಾಲೇಜಿನ ಬಳಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ ” ಅತ್ಯಂತ ದುಬಾರಿ ವೆಚ್ಚದ ನಮ್ಮ ಮೆಟ್ರೋದಿಂದಾಗಿ ವಿದ್ಯಾರ್ಥಿ ಸಮೂಹ ಸಂಪೂರ್ಣ ಮೆಟ್ರೋ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಸಂಚಾರ ಒತ್ತಡಗಳಿಂದಾಗಿ ಸಮಯಕ್ಕೆ ಸರಿಯಾಗಿ ತಲುಪಲಾಗದೆ ಸಾಕಷ್ಟು ಪರದಾಡುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವು ಸಹ ಕುಸಿ ಯುತ್ತಿದ್ದು ಈ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ಗಳನ್ನು ವಿತರಿಸಬೇಕು. ಇದಕ್ಕಾಗಿ ಸರ್ಕಾರವನ್ನು ಒತ್ತಾಯಿಸಲು ನಾವು ಲಕ್ಷಾಂತರ ವಿದ್ಯಾರ್ಥಿ ಸಮೂಹಗಳಿಂದ ಸಹಿ ಸಂಗ್ರಹಣ ಅಭಿಯಾನವನ್ನು ನಡೆಸುತ್ತಿದ್ದೇವೆ. ಆಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳ ಬೇಕು. ಈ ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಧಾವಿಸ ಸಬೇಕಾಗಿದೆ ” ಎಂದು ಅಗ್ರಹಿಸಿದರು.



ಇದೇ ಸಂದರ್ಭದಲ್ಲಿ ಯುವ ಘಟಕದ ಉಪಾಧ್ಯಕ್ಷ ಉಮೇಶ್ ಗೌಡ ಮಾತನಾಡಿ ” ನಾವು ಸತತವಾಗಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳ ಬಳಿ ತೆರಳಿ ಸರ್ಕಾರದ ಮೇಲೆ ಒತ್ತಡ ತರಲು ಸಹಿ ಸಂಗ್ರಹಣೆಯನ್ನು ಮಾಡುತ್ತಿದ್ದೇವೆ. ವಿದ್ಯಾರ್ಥಿ ಸಮೂಹ ಈ ಅಭಿಯಾನಕ್ಕೆ ಸಂಪೂರ್ಣ ಬೆಂಬಲವನ್ನು ಈಗಾಗಲೇ ಸೂಚಿಸುತ್ತಿದ್ದಾರೆ. ಎಲ್ಲರೂ ತಮ್ಮ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ತರಬೇಕು. ಪಕ್ಷಾತೀತವಾಗಿ ಎಲ್ಲ ನಾಯಕರುಗಳು ವಿದ್ಯಾರ್ಥಿಗಳ ಅನುಕೂಲಕ್ಕೆ ಕೂಡಲೇ ಭಾವಿಸಬೇಕು ” ಎಂದು ಒತ್ತಾಯಿಸಿದರು.
ಅಭಿಯಾನದಲ್ಲಿ ಪಕ್ಷದ ಯುವ ಘಟಕದ ಬೆಂಗಳೂರು ನಗರಾಧ್ಯಕ್ಷ ಓಂಕಾರ್ ಮಂಜುನಾಥ್ , ಮುಖಂಡರುಗಳಾದ ನವೀನ್ ಅಯ್ಯರ್, ಇಂದು, ಭಾನುಪ್ರಿಯ, ರೋಹಿತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.














