ಇತ್ತೀಚಿನ ಸುದ್ದಿ
ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು
23/08/2025, 18:28

ಮಡಿಕೇರಿ(reporterkarnataka.com): ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳು ಡಿಸ್ಕಸ್ ಥ್ರೋ ಅಭ್ಯಾಸ ನಡೆಸುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಅಡ್ಡ ಬಂದ ವಿದ್ಯಾರ್ಥಿಯೊಬ್ಬರ ತಲೆಗೆ ಡಿಸ್ಕಸ್ ಬಡಿದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ವಿರೂಪಾಕ್ಷಪುರ ಗ್ರಾಮದ ಶೇಖರ್, ಆಶಾ ದಂಪತಿ ಪುತ್ರ 8ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಗಾಯಗೊಂಡ ವಿದ್ಯಾರ್ಥಿಯಾಗಿದ್ದು,ಕೋಮಾ ಸ್ಥಿತಿಗೆ ತಲುಪಿದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.