4:51 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಕರಾವಳಿ ಜಿಲ್ಲೆಗಳ ಮಳೆಹಾನಿ ಕುರಿತು ಸಿಎಂ, ಸಚಿವರ ಜತೆ ಚರ್ಚೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

21/05/2025, 23:34

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀಗಾಗಿ ಮಳೆಹಾನಿ ಪ್ರದೇಶಗಳಲ್ಲಿ ಈಗಾಗಲೇ ಸಮೀಕ್ಷೆಯನ್ನು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಸಮಾಲೋಚನೆಯನ್ನು ನಡೆಸಿದ್ದು ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ, ಗಾಳಿಯಿಂದ ಹೆಚ್ಚಿನ ಅಪಾಯ ಮತ್ತು ಹಾನಿಯುಂಟಾಗುವುದನ್ನು ತಡೆಯಲು ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ನಿರ್ದೇಶನವನ್ನು ನೀಡಿದ್ದೇನೆ. ಮುಖ್ಯಮಂತ್ರಿಗಳು ಹಾಗೂ ಸಚಿವರ ಬಗ್ಗೆ ಈ ಕುರಿತು ಮಾತಾಡಿ ಜಿಲ್ಲೆಯಲ್ಲಿ ಮಳೆಯಿಂದ ಆಗುವ ತೊಂದರೆಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು