11:13 PM Sunday19 - April 2026
ಬ್ರೇಕಿಂಗ್ ನ್ಯೂಸ್
ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು…

ಇತ್ತೀಚಿನ ಸುದ್ದಿ

ನಿವೃತ್ತ ಸರಕಾರಿ ನೌಕರರ ಆರ್ಥಿಕ ನಷ್ಟ ಪರಿಹಾರಕ್ಕೆ ಸಿಎಂ ಜತೆ ಚರ್ಚೆ: ಎಂಎಲ್‌ಸಿ ಐವನ್ ಡಿಸೋಜ

29/03/2025, 23:13

ಮಂಗಳೂರು(reporterkarnataka.com): ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ, ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.


ಅವರು ಶನಿವಾರ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ.ಜಿಲ್ಲೆ ಮಂಗಳೂರು ಮತ್ತು ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ೨೬ ಸಾವಿರ ಮಂದಿ ನಿವೃತ್ತ ಸರಕಾರಿ ನೌಕರರಿಗೆ ಸಮಸ್ಯೆಯಗಿದ್ದು, ದ.ಕ.ದಲ್ಲಿ ೬೦೦ಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಗುರಿಯಾಗಿರುವುದು ಬೇಸರದ ವಿಚಾರವಾಗಿದೆ. ಸಮಾಜ ಹಾಗೂ ಸರಕಾರಕ್ಕೆ ಈ ನಿವೃತ್ತ ನೌಕರರ ಸೇವೆ ಅಪಾರವಿದೆ. ಅವರಿಗೆ ಎಂದಿಗೂ ಅನ್ಯಾಯವಾಗಬಾರದು. ಮುಖ್ಯಮಂತ್ರಿಗಳಿಗೆ ಈ ಕುರಿತು ಮನವರಿಕೆ ಮಾಡಿಕೊಂಡು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಇದೇ ಸಂದರ್ಭ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯಿಂದ ಮನವಿಯನ್ನು ನೀಡಲಾಯಿತು.
ಈ ಸಂದರ್ಭ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕ ಡಾ.ಎಂ.ಪಿ.ಎ.ಷಣ್ಮುಖಯ್ಯ ಮಾತನಾಡಿ, ಜು.೧,೨೦೨೨ರಿಂದ ಜು.೩೧,೨೦೨೪ರ ಅವಧಿಯಲ್ಲಿ ನಿವೃತ್ತ ಸರಕಾರಿ ಅಧಿಕಾರಿ/ನೌಕರ ವರ್ಗದ ನಿವೃತ್ತರಿಗೆ ೭ನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನಿವೃತ್ತಿ ಉಪಲಬ್ದಗಳನ್ನು ಪಾವತಿಸುವ ಸಂದರ್ಭದಲ್ಲಿ ಆರ್ಥಿಕ ನಷ್ಟವನ್ನು ರಾಜ್ಯ ಸರಕಾರ ಮಾಡಿದೆ. ಈ ಕಾರಣದಿಂದ ನಿವೃತ್ತ ಸರಕಾರಿ ನೌಕರರ ಜತೆಗೂಡಿಕೊಂಡು ಮೂರನೇ ಬಾರಿಗೆ ಬೆಂಗಳೂರು ಚಲೋ ಮಾಡುತ್ತಿದ್ದೇವೆ. ಏ.೩ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಏ.೪ರಂದು ಅರಮನೆ ಮೈದಾನದಲ್ಲಿ ರಾಜ್ಯ ಸಮ್ಮೇಳನದಲ್ಲಿ ನಮ್ಮ ಬೇಡಿಕೆಯನ್ನು ಸಿಎಂ ಮುಂದೆ ಮಂಡಿಸಲಿದ್ದೇವೆ. ಅಲ್ಲಿ ನ್ಯಾಯ ಸಿಗದೇ ಹೋದಲ್ಲಿ ಮುಂದೆ ಅನಿರ್ದಿಷ್ಟಾವಧಿಯ ಹೋರಾಟ, ನ್ಯಾಯಾಲಯಕ್ಕೆ ಮೊರೆ ಹೋಗಲು ನಿರ್ಧಾರ ಮಾಡಲಾಗಿದೆ ಎಂದರು.
ಈ ಸಂದರ್ಭ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ರಾಜ್ಯ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿ ಎ,ಬಿ,ಸಿ,ಡಿ ವರ್ಗದ ನಿವೃತ್ತ ಸರಕಾರಿ ನೌಕರರಿಗೆ ಲಕ್ಷಗಟ್ಟಲೆ ಮೊತ್ತವನ್ನು ಸರಕಾರ ನೀಡದೇ ಅನ್ಯಾಯ ಮಾಡಿದೆ. ಯಾವುದೇ ದುಡ್ಡನ್ನು ನಾವ್ ಬೇಡ್ತಾ ಇಲ್ಲ ನಮ್ಮ ಕೆಲ್ಸದ ಹಣವನ್ನು ಮಾತ್ರ ಕೇಳ್ತಾ ಇದ್ದೇವೆ. ಬೆಂಗಳೂರು ಚಲೋದ ಮೂಲಕ ನಮ್ಮ ಹೋರಾಟ ಮುಂದುವರಿಯಲಿದೆ. ಸರಕಾರ ಈ ಕುರಿತು ಗಮನಹರಿಸಿಕೊಂಡು ನ್ಯಾಯ ನೀಡಬೇಕು ಎಂದರು.
ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆಯ ಉಳ್ಳಾಲ ಸಂಚಾಲಕರಾದ ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಸೀತಾರಾಮ್, , ಮೋಹನ ಬಂಗೇರ, ಡೇಸಿ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಸಂಚಾಲಕ ಸ್ಟಾ÷್ಯನಿ ತಾವ್ರೋ ಸ್ವಾಗತಿಸಿದರು. ನಾರಾಯಣ ಪೂಜಾರಿ ವಂದಿಸಿದರು. ಬಿ.ಮನಮೋಹನ ರಾವ್ ನಿರೂಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಕ್ಕೂ ಮಿಕ್ಕಿದ ನಿವೃತ್ತ ಸರಕಾರಿ ನೌಕರರು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು