12:44 AM Wednesday4 - December 2024
ಬ್ರೇಕಿಂಗ್ ನ್ಯೂಸ್
ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ… ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ 3 ದಶಕಗಳ ಮೆರುಗು: ಡಿ.10ರಿಂದ 15ರ ವರೆಗೆ ಆಳ್ವಾಸ್… ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ…

ಇತ್ತೀಚಿನ ಸುದ್ದಿ

ಡಿವೈಡರ್ ಹಾರಿದ ಕಾರು ತಾಯಿ ಸಾವು , ಮಗಳು ಗಂಭೀರ

20/05/2021, 14:09

ಮಂಗಳೂರು(reporterkarnatakanews):ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು, ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಕುಂಪಲ ನಿವಾಸಿ ವಸಂತಿ (50) ಮೃತರು. ಪುತ್ರಿ ಶ್ರೀಜಾ ( 20) ಎಂಬವರನ್ನು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ: ಕುಂಪಲ ಕಡೆಯಿಂದ ಕಲ್ಲಾಪುವಿನತ್ತ ಸ್ಕೂಟರಿನಲ್ಲಿದ್ದ ತಾಯಿ ಮಗಳಿಗೆ , ಮಂಗಳೂರಿನಿಂದ ತಲಪಾಡಿಯತ್ತ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಫ್ಲೈಓವರ್ ಮೇಲೆ ಕಾರು ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿ ಸವಾರೆಯಾಗಿದ್ದ ವಸಂತಿ ಫ್ಲೈಓವರಿನಿಂದ ಕೆಳಗೆ ರಸ್ತೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕ ಶಮಿತ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು