12:22 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಜ. 7ರಂದು “ದೈವಜ್ಞ ದರ್ಶನ”: ಉಭಯ ಶ್ರೀಗಳ ಪೂರ್ಣಕುಂಭ ಸ್ವಾಗತ ಮೆರವಣಿಗೆ

06/01/2026, 23:04

ಮಂಗಳೂರು(reporterkarnataka.com): ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ. ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರ ದೈವಜ್ಞ ದರ್ಶನ ಕಾರ್ಯಕ್ರಮ ಜನವರಿ 7ರಂದು ಸಂಜೆ 6.00 ಗಂಟೆಗೆ ನಗರದ ಅಶೋಕನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನೆರವೇರಲಿದೆ.
ದೈವಜ್ಞ ಬ್ರಾಹ್ಮಣ ಸಮಾಜದ ಸರ್ವಾಂಗೀಣ ವಿಕಾಸ, ಸಮಾಜ ಸಂಘಟನೆ ಹಾಗೂ ಧಾರ್ಮಿಕ ಭಾವನೆಗಳ ಸಂವರ್ಧನೆಗಾಗಿ ನಾಲ್ಕು ದಶಕಗಳ ಹಿಂದೆ ಸ್ಥಾಪಿಸಲಾದ ದೈವಜ್ಞ ಶ್ರೀ ಮಠವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಕರ್ತವ್ಯಗಳನ್ನು ಪೂರೈಸುತ್ತಾ ಮುಂದುವರೆಯುತ್ತಿದ್ದು, ಇದೀಗ ದೇವರನ್ನು ತಿಳಿದು ದೈವಯಜ್ಞ ಮುಂತಾದವುಗಳನ್ನು ಆಚರಿಸುತ್ತಾ ದೈವಜ್ಞರೆಂದು ಖ್ಯಾತರಾದ ಸಮಾಜ ಬಾಂಧವರನ್ನು ಸಂದರ್ಶಿಸಲು ಹಾಗೂ ತಮ್ಮ ಉತ್ತರಾಧಿಕಾರಿಯಾದ ಶ್ರೀಗಳವರನ್ನು ಪರಿಚಯಿಸಲು ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು ತತ್ ಕರಕಮಲ ಸಂಜಾತರಾದ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರೊಂದಿಗೆ “ದೈವಜ್ಞ ದರ್ಶನ” ಎಂಬ ಕಾರ್ಯ ನಿಮಿತ್ತ ಮಂಗಳೂರಿಗೆ ಚಿತ್ತೈಸಲಿರುವರು.
*ಸಂಜೆ 5.00 ಗಂಟೆಗೆ ಶ್ರೀ ಶ್ರೀಗಳವರ ಆಗಮನ:* ಪೂರ್ಣಕುಂಭ ಸ್ವಾಗತ ಉಭಯ ಶ್ರೀಗಳು ಮಣ್ಣಗುಡ್ಡೆ ಗುರ್ಜಿ ಬಳಿಯಿಂದ ಸಂಜೆ 5.30ಕ್ಕೆ ಪೂರ್ಣಕುಂಭ ಸ್ವಾಗತ – ಮೆರವಣಿಗೆ ಮೂಲಕ ದೈವಜ್ಞ ಕಲ್ಯಾಣ ಮಂಟಪಕ್ಕೆ ಅಗಮಿಸಲಿರುವರು. ದೈವಜ್ಞ ಮಹಿಳಾ ಮಂಡಳಿಯವರಿಂದ ಚೆಂಡೆ ಹಾಗೂ ಭಜನೆ ಕುಣಿತ ಹಾಗೂ ಟ್ಯಾಬ್ಲೋ, ಮಂಗಳವಾದ್ಯದೊಂದಿಗೆ ಮೆರವಣಿಗೆ ಮೂಲಕ ದೈವಜ್ಞ ಕಲ್ಯಾಣ ಮಂಟಪಕ್ಕೆ ಆಗಮಿಸಿ ಗೌರವ ಸನ್ಮಾನ ಸ್ವೀಕರಿಸಿ, ಬಳಿಕ ಸಂಜೆ 6:30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅಶೀರ್ವಚನ ನೀಡಲಿರುವರು. ಇದೇ ವೇಳೆ ಗುರುವಂದನೆ. ಶ್ರೀ ಶ್ರೀಗಳವರಿಗೆ ಫಲಪುಷ್ಪ ಸಮರ್ಪಣೆ. ದಾನಿಗಳಿಗೆ ಗೌರವಾರ್ಪಣೆ ಹಾಗೂ ಶ್ರೀಗಳವರಿಗೆ ಸಮಾಜದ ವತಿಯಿಂದ ಪಾದೂಕಾ ಪೂಜೆ ನೆರವೇರಲಿದೆ ಎಂದು ದೈವಜ್ಞ ಬ್ರಾಹ್ಮಣರ ಸಂಘದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು