ಇತ್ತೀಚಿನ ಸುದ್ದಿ
DK | ಸುಳ್ಯ ಸಮೀಪದ ಆರಂತೋಡುನಲ್ಲಿ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ: ಅಪಾರ ಹಾನಿ
10/07/2025, 19:23

ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಘನ ತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಇಲ್ಲಿನ ಕೊಂಡೆಕೇರಿಯಲ್ಲಿರುವ ಗೋಡೌನ್ ನಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ತಗುಲಿದ್ಧು ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ಹಲವೆಡೆ ಬೆಂಕಿ ಆವರಿಸಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಸಲಾಗಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.