6:33 PM Saturday3 - May 2025
ಬ್ರೇಕಿಂಗ್ ನ್ಯೂಸ್
ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ಖರ್ಗೆ, ರಾಹುಲ್…

ಇತ್ತೀಚಿನ ಸುದ್ದಿ

DK BJP | ರಾಜಕೀಯ ದುರುದ್ದೇಶಕ್ಕಾಗಿ ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ದುರ್ಬಳಕೆ: ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪ

01/05/2025, 20:20

ಮಂಗಳೂರು(reporterkarnataka.com):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ನಿರಂತರವಾಗಿ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು‌ ಕೇಸುಗಳನ್ನು ಹಾಕುವುದರ ಮೂಲಕ ಮಾನಸಿಕವಾಗಿ ಕುಗ್ಗಿಸುವ ಕಾರ್ಯವನ್ನು ಪೊಲೀಸ್ ಇಲಾಖೆಯನ್ನು ಬಳಸಿ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷಸತೀಶ್ ಕುಂಪಲ ಆರೋಪಿಸಿದರು.
ದೇಶದ ಪರವಾಗಿ, ಹಿಂದುತ್ವದ ಕಾರ್ಯ ನಡೆಸುತ್ತಿರುವ ಕಾರ್ಯಕರ್ತರನ್ನು ಕಂಡಾಗ ಕಣ್ಣು ಕೆಂಪಾಗುವ ಸಿದ್ದರಾಮಯ್ಯ ನವರು ದೇಶದ್ರೋಹಿ ಕಿಡಿಗೇಡಿಗಳ ಬಗ್ಗೆ ಮೃದುತ್ವ ಪ್ರದರ್ಶಿಸಿ ಬಣ್ಣ ಬದಲಾಯಿಸುತ್ತಾರೆ. ಈ ಮೂಲಕ ರಾಜ್ಯದಲ್ಲಿ ಸಂವಿಧಾನಕ್ಕೆ ವಿರುದ್ದವಾಗಿ ಸರ್ಕಾರ ಆಡಳಿತ ನಡೆಸುತ್ತಿದೆ.
ವಿಧಾನ ಸಭೆಯ ಒಳಗಡೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಕ್ರಮ ಗೊಳ್ಳಲು ತೋರಿದ ವಿಳಂಬ ರಾಜ್ಯದಲ್ಲಿ ನಡೆದ ಮತಾಂಧ ಕಿಡಿಗೇಡಿಗಳ ಕೃತ್ಯದ ಬಗ್ಗೆ ಸರ್ಕಾರದ ಮೌನ, ಪಾಕಿಸ್ತಾನ ಧ್ವಜಕ್ಕೆ ಪ್ರೀತಿ ತೋರಿದವರ ವಿರುದ್ಧ ಕ್ರಮ ಜರುಗಿಸಲು ನಿರ್ಲಕ್ಷ್ಯ ಗಳ ಪರಿಣಾಮವಾಗಿ ಮಂಗಳೂರಿನ ಕುಡುಪಿನಲ್ಲಿ ದೇಶದ್ರೋಹಿಗೆ ಪಾಕಿಸ್ತಾನ ಜಿಂದಾಬಾದ್ ಕೂಗುವ ಧೈರ್ಯ ಬಂದಿದೆ‌. ಅಲ್ಲಿ‌ನಡೆದ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆಯು ಅಮಾಯಕರನ್ನು ಬಂದಿಸಿರುವುದು, ಮನೆಗಳಿಗೆ ದಾಳಿ ನಡೆಸುತ್ತಿರುವುದು ಕಾಂಗ್ರೆಸ್ ನ‌ ಕುಮ್ಮಕ್ಕಿ ನಿಂದ ನಡೆಯುತ್ತಿದೆ. ಇಂತಹ ಘಟನೆಗಳಿಂದ ದೇಶಭಕ್ತರು ರೋಷ ಗೊಂಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ಮತಾಂಧರ ಪರವಾಗಿಯೇ ಇರುವಂತಹ ಭಾವನೆ ಜನಸಾಮಾನ್ಯರಲ್ಲಿ ಮೂಡಿದೆ. ಮಂಗಳೂರಿನ ಕುಡುಪು ಪರಿಸರದ ಘಟನೆಯನ್ನು ಕಾಂಗ್ರೆಸ್ ರಾಜಕೀಯ ದುರುದ್ದೇಶಕ್ಕಾಗಿ ಬಳಸುತ್ತಿದೆ. ಪೊಲೀಸ್ ಇಲಾಖೆಯನ್ನು ಕೈಗೊಂಬೆಯಾಗಿಸುತ್ತಿದೆ. ಇದನ್ನು ಭಾರತೀಯ ಜನತಾ ಪಾರ್ಟಿಯು ಸಹಿಸಲು ಸಾಧ್ಯವಿಲ್ಲ, ಶಾಂತಿಯುತ ದಕ್ಷಿಣ ಕನ್ನಡ ವನ್ನು ಕದಡುವ ಷಡ್ಯಂತ್ರ ನಡೆಯುತ್ತಿದೆ, ಸಂಘಟನೆಯ, ಪಕ್ಷದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕುಂಪಲ ಆಗ್ರಹಿಸಿದ್ದಾರೆ.
ಸಂಘ ಪರಿವಾರದ ಕಾರ್ಯಕರ್ತರ ಮನೋಬಲವನ್ನು ಕುಗ್ಗಿಸುವ ಕಾಂಗ್ರೆಸ್ ನ ಭಂಡ ಪ್ರಯತ್ನ ಎಂದಿಗೂ ಯಶಸ್ವಿಯಾಗದು. ಕುಡುಪು ಪ್ರಕರಣದ ಬಗ್ಗೆ ಕೂಲಂಕುಷವಾದ ತನಿಖೆಯಾಗ ಬೇಕಿದೆ. ಪೊಲೀಸ್ ಇಲಾಖೆ ಕಾಂಗ್ರೆಸ್ ನ ಕಪಿಮುಷ್ಠಿಯಲ್ಲಿದೆ ಎನ್ನುವುದನ್ನು ಕಳಚಿಸುವ ದಿಟ್ಟತನ ಪೊಲೀಸರಿಂದ ಆಗಬೇಕಿದೆ. ಇಲ್ಲವಾದರೆ ಭವಿಷ್ಯದಲ್ಲಿ ಸಂಭವಿಸುವ ಘಟನೆಗಳಿಗೆ ಇಲಾಖೆಯೇ ಹೊಣೆ ಹೊರೆ ಹೊರಬೇಕಾದೀತು ಎಂದು ಕುಂಪಲ ರವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು