1:23 AM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ದ.ಕ. ಕೈ ಕಚೇರಿಯಲ್ಲಿ ಕೈಕೈ ಮಿಲಾಯಿಸಿದರೇ ಕೈ ಮುಖಂಡರು?: ಖಾಕಿ ಎಂಟ್ರಿ ಕೊಟ್ಟಿರುವುದು ಯಾಕೆ?

02/12/2024, 15:20

ಮಂಗಳೂರು(reporterkarnataka.com): ಪಂಚಾಯಿತಿ ಉಪ ಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್​ ಪಕ್ಷದ ಕಚೇರಿಯಲ್ಲಿ ಹೊಡೆದಾಟ ನಡೆದಿದೆ.


ಜಿಲ್ಲಾ ಮುಖಂಡರು ಕೈಕೈ ಮಿಲಾಯಿಸಿದ್ದಾರೆ. ಪಂಚಾಯಿತಿ ಉಪ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಗೆದ್ದ ಅಭ್ಯರ್ಥಿ ಗಳನ್ನು ಸನ್ಮಾನಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದು, ನಂತರ ಅದು ಹೊಡೆದಾಟಕ್ಕೆ ತಿರುಗಿದೆ.
ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್​ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ತಕ್ಷಣ ಕಾಂಗ್ರೆಸ್ ಕಚೇರಿಗೆ ಪೊಲೀಸರು ಆಗಮಿಸಿದ್ದಾರೆ. ಸಂಟ್ರಲ್ ಎಸಿಪಿ ಮತ್ತು ಕದ್ರಿ ಪೊಲೀಸರು ಆಗಮಿಸಿದ್ದಾರೆ. ಉಭಯ ಗುಂಪುಗಳ ನಡುವೆ
ಸಂಧಾನ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಒಂದು ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು