ಇತ್ತೀಚಿನ ಸುದ್ದಿ
DK Congress | ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಅಹವಾಲು ಸ್ವೀಕಾರ
05/04/2025, 23:57

ಮಂಗಳೂರು(reporterkarnataka.com): ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶನಿವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.