1:22 PM Thursday21 - August 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ… ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ

ಇತ್ತೀಚಿನ ಸುದ್ದಿ

DK District | ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 21 ಪರೀಕ್ಷಾ ಕೇಂದ್ರ; 9080 ವಿದ್ಯಾರ್ಥಿಗಳು

26/03/2025, 20:07

ಮಂಗಳೂರು(reporterkarnataka.com): ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಸಭೆಯಲ್ಲಿ ಮಾತನಾಡಿ, ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮಾತ್ರ ನೀಟ್ ಪರೀಕ್ಷಾ ಕೇಂದ್ರಗಳಿವೆ. ಮೇ 4 ರಂದು ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ತಯಾರಿಸಿ ಪರೀಕ್ಷಾ ಕೇಂದ್ರಗಳ ಕೊಠಡಿಯಲ್ಲಿ ಸಿ.ಸಿ ಕ್ಯಾಮೆರಾದ ವ್ಯವಸ್ಥೆ ಹಾಗೂ ಪೀಠೋಪಕರಣದ ವ್ಯವಸ್ಥೆಯನ್ನು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಾರ್ಗಸೂಚಿಗಳನ್ವಯ ಕಟ್ಟುನಿಟ್ಟಿನ ಸಿದ್ಧತೆಗಳನ್ನು ಕೈಗೊಳ್ಳಲು ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಮಾತನಾಡಿ, ಮೇ 4ರಂದು ನಡೆಯುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 21 ಪರೀಕ್ಷಾ ಕೇಂದ್ರಗಳಿದ್ದು, 9080 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ ಎಂದು ತಿಳಿಸಿದರು.
ನೀಟ್ ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನುಡಿದರು.
ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಅಭ್ಯರ್ಥಿಗಳ ತಪಾಸಣೆ ಸೇರಿದಂತೆ ವಿವಿಧ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು