7:57 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: 8 ಕ್ಷೇತ್ರ; ಅಂತಿಮ ಕಣದಲ್ಲಿ ಒಟ್ಟು 60 ಅಭ್ಯರ್ಥಿಗಳು; ಕಾಂಗ್ರೆಸ್, ಬಿಜೆಪಿ, ಎಎಪಿ ಎಲ್ಲ ಕಡೆ ಸ್ಪರ್ಧೆ

24/04/2023, 22:38

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂತೆಗೆತ ಪೂರ್ಣಗೊಂಡಿದ್ದು, ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿ ಗಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜನತಾ ದಳ ಮಂಗಳೂರು ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಸ್ಪರ್ಧಿಸುತ್ತಿದೆ. 10 ಮಂದಿ ಪಕ್ಷೇತರರು ಅಖಾಡದಲ್ಲಿದ್ದಾರೆ. ಆರ್ ಯುಪಿಪಿ 19 ಮಂದಿ ಸ್ಪರ್ದಿಸುತ್ತಿದ್ದಾರೆ. ವರ್ಷಪೂರ್ತಿ ಬೀದಿಯಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿರುವ ಎಡಪಕ್ಷಗಳು ಒಂದೇ ಒಂದು ಅಭ್ಯರ್ಥಿಯನ್ನು ಚುನಾವಣಾ ರಣರಂಗಕ್ಕೆ ಇಳಿಸದಿರುವುದು ವಿಶೇಷವಾದರೆ, ಜಿಲ್ಲೆಯಲ್ಲಿ
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಆಮ್ ಆದ್ಮಿ ಪಾರ್ಟಿ ಎಲ್ಲ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ.
ಅಂತಿಮ ಕಣದಲ್ಲಿರುವ ಒಟ್ಟು 60 ಮಂದಿ ಅಭ್ಯರ್ಥಿಗಳ ಪೈಕಿ 52 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು