7:09 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ 2013ರ ಫಲಿತಾಂಶ ಮರುಕಳಿಸಲಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭವಿಷ್ಯ

26/04/2023, 21:31

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತ ಪಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ 8 ಸ್ಥಾನಗಳ ಗೆಲುವಿನ ಜತೆಗೆ 2013ರ ಫಲಿತಾಂಶ ಮರುಕಳಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ಪರ ಅಲೆ ಇದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 8 ಸ್ಥಾನಗಳ ಪೈಕಿ 7 ಸ್ಥಾನಗಳಲ್ಲಿ ಜಯಗಳಿಸಿತ್ತು. ಈ ಬಾರಿ ಚುನಾವಣೆಯಲ್ಲಿ ಈ ಫಲಿತಾಂಶ ಮರಕಳಿಸುವುದರೊಂದಿಗೆ 8ರಲ್ಲಿ 8 ಸ್ಧಾನಗಳನ್ನು ಗೆದ್ದುಕೊಳ್ಳಲಿದೆ ಎಂದವರು ಹೇಳಿದರು.


ಕಾಂಗ್ರೆಸ್‌ಗೆ ಸ್ಪಷ್ಟ ಜನಾದೇಶ ದೊರೆಯಲಿದೆ. ಪಕ್ಷಕ್ಕೆ ರಾಜ್ಯದಲ್ಲಿ ವ್ಯಕ್ತವಾಗುತ್ತಿರುವ ಭಾರಿ ಜನಸ್ಪಂದನೆಯಿಂದ ಬಿಜೆಪಿ ಹತಾಶಗೊಂಡಿದೆ. ಅವರಲ್ಲಿ ಹೇಳಿಕೊಳ್ಳುವಂತ ಯಾವುದೇ ಸಾಧನೆ ಕಾರ್ಯಕ್ರಮಗಳಿಲ್ಲ. ಶೇ.40 ಕಮಿಷನ್ ಸರಕಾರ ಎಂಬುದು ಅವರಿಗೆ ಬ್ರಾಂಡ್ ಆಗಿದೆ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿಯ ಸಾಧನೆ ಎಂದರೆ ಭ್ರಷ್ಟಚಾರ ಮತ್ತು ಜನವಿರೋಧಿ ಆಡಳಿತ ಎಂದವರು ಹೇಳಿದರು.
ಕಾಂಗ್ರೆಸ್‌ನ ಹಿಂದಿನ ಸಿದ್ದರಾಮಯ್ಯ ಸರಕಾರ ನೀಡಿದ್ದ ಭರವಸೆಗಳಲ್ಲಿ ಶೇ.90ರಷ್ಟನ್ನು ಈಡೇರಿಸಿತ್ತು. ಆದರೆ ಬಿಜೆಪಿ ನೀಡಿದ್ದ ಭರವಸೆಗಳಲ್ಲಿ ಕೇವಲ ಶೇ25 ಮಾತ್ರ ಈಡೇರಿಸಿದೆ. ಕಾಂಗ್ರೆಸ್ ಈ ಬಾರಿ ಆಡಳಿತಕ್ಕೆ ಬರಲಿದೆ ಮತ್ತು ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ. ಪಕ್ಷ ನೀಡಿರುವ 4 ಗ್ಯಾರಂಟಿಗಳನ್ನು ಅಧಿಕಾರ ಬಂದ ಪ್ರಥಮ ಸಚಿವ ಸಂಪುಟ ಸಭೆಯಲ್ಲೇ ಅನುಮೋದಿಸಿ ಜಾರಿಗೊಳಿಸಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಪದ್ಮರಾಜ್,ಶುಭೋದಯ ಆಳ್ವ, ನೀರಜ್‌ಪಾಲ್, ನಜೀರ್ ಬಜಾಲ್, ಸವಾದ್, ಆರಿಫ್, ಅಲ್ತಾಫ್ ಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು