12:18 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ

25/01/2025, 21:27

ಮಂಗಳೂರು(reporter Karnataka.com); :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.


ಶನಿವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆಗೊಂಡರೆ, ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಡೆಸಿಕೊಟ್ಟರು.
ಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ , 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಕಳೆದ ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
*ಡಾ.ಎಂಎನ್ ಆರ್ ಗೆ ಕೃತಜ್ಞತೆ ಸಮರ್ಪಣೆ:* ಸುಮಾರು 93 ವರ್ಷಗಳ ಇತಿಹಾಸವನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ನೌಕರರ ಏಕೈಕ ಸಹಕಾರಿ ಸಂಸ್ಥೆ ‘ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಇಂದು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮುಖ್ಯ ಕಾರಣಕರ್ತರಾಗಿದ್ದಾರೆ. ಅವರ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನದಿಂದಲೇ ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್ ನಲ್ಲಿ ಮೂರು ಅಂತಸ್ತಿನ ಸುಸಜ್ಜಿತ ಸ್ವಂತ ಕಟ್ಟಡವನ್ನು ಹೊಂದಲು ಸಾಧ್ಯವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಕೂಡ ಅವರ ಮಾರ್ಗದರ್ಶನದಲ್ಲೇ ನಡೆದು 15 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಇದೀಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕೂಡ ಅವಿರೋಧವಾಗಿ ಆಯ್ಕೆಗೊಂಡಿದ್ದು, ಈ ಸಂದರ್ಭದಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ನೂತನ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ಕೃತಜ್ಞತೆಯನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ. ಕಾರ್ಕಳ, ವಿಶ್ವೇಶ್ವರ ಐತಾಳ್ ಎಸ್. ಕುಂದಾಪುರ, ಜಯಪ್ರಕಾಶ್ ರೈ ಸಿ. ಪುತ್ತೂರು, ವಿಶ್ವನಾಥ್ ಕೆ.ಟಿ. ಸುಳ್ಯ, ವಿಶ್ವನಾಥ್ ಎನ್. ಅಮೀನ್ ಉಡುಪಿ, ಶಿವಾನಂದ ಪಿ. ಬಂಟ್ವಾಳ, ಗಿರಿಧರ್ ಕೆ. ಬೆಳ್ತಂಗಡಿ, ಚಂದ್ರಕಲಾ ಕೆ. ಮಂಗಳೂರು, ಗೀತಾಕ್ಷಿ ಮಂಗಳೂರು, ಕಿರಣ್ ಕುಮಾರ್ ಶೆಟ್ಟಿ ಮಂಗಳೂರು, ನಿಶಿತಾ ಜಯರಾಮ್ ಮಂಗಳೂರು, ಮೋಹನ್ ಎಸ್. ಮಂಗಳೂರು, ಪ್ರೇಮರಾಜ್ ಭಂಡಾರಿ ಮಂಗಳೂರು ಹಾಗೂ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು