ಇತ್ತೀಚಿನ ಸುದ್ದಿ
ವೈದ್ಯರ ನಿರ್ಲಕ್ಷ್ಯ: ತುರ್ತು ಚಿಕಿತ್ಸೆ ಸಿಗದೆ ಉಸಿರಾಟ ತೊಂದರೆಯ ರೋಗಿ ಸಾವು: ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ
05/01/2026, 12:33
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (60) ಅವರು ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಆಸ್ಪತ್ರೆಗೆ ಬಂದು ಸುಮಾರು ಒಂದು ಗಂಟೆ ಕಳೆದರೂ ಸೂಕ್ತ ಚಿಕಿತ್ಸೆ ಸಿಗದೆ ಮಂಜುನಾಥ್ ಪರದಾಡಿದ್ದು, ನಂತರ ತಡವಾಗಿ ಐಸಿಯುವಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮಂಜುನಾಥ್ ಮೃತಪಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿ ರೋಗಿಗಳಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಮೃತರ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.














