12:20 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಡೋಲ್ಪಿ ಡಿಸೋಜ ನಿರ್ಮಾಣದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಶರವು ದೇವಸ್ಥಾನದಲ್ಲಿ ಮುಹೂರ್ತ

02/11/2024, 11:33

ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.


ಶರವು ರಾಘವೇಂದ್ರ ಶಾಸ್ತ್ರಿ ಸಿನಿಮಾಕ್ಕೆ ಕ್ಲಾಪ್ ಮಾಡಿದರು.
ನಟ ವಿನೀತ್ ಕುಮಾರ್, ನಟಿ ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ನಿರ್ದೇಶಕ ರಂಜಿತ್ ಸಿ ಬಜಾಲ್, ನಿರ್ಮಾಪಕ ಡೋಲ್ಪಿ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತ ಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ. ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು