9:32 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ದೊಂಬಿ, ಗಲಭೆ ಪ್ರಕರಣ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

16/10/2023, 16:01

ಮಂಗಳೂರು(reporterkarnataka.com):ದೊಂಬಿ, ಗಲಾಟೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಗರದ ಬಜಾಲ್ ಪೈಜಲ್ ನಗರದ ನಿವಾಸಿ ತೌಸೀಫ್ (27) ಎಂದು ಗುರುತಿಸಲಾಗಿದೆ. ಆರೋಪಿಯು 4 ವರ್ಷಗಳಿಂದ ದಸ್ತಗಿರಿಗೆ ಸಿಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆಯಂತಹ ಮೂರು ಪ್ರಕರಣದಲ್ಲಿ ಭಾಗಿಯಾದ ಆರೋಪ ಈತನ ಮೇಲಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಮಾಹಿತಿ ಸಂಗ್ರಹಿಸಿ ಈತನ ಪತ್ತೆಯ ಕುರಿತು ಲುಕ್ ಔಟ್ ನೋಟೀಸು (LOC) ಹೊರಡಿಸಿದ್ದರು.
ಇದೀಗ ಅ.14ರಂದು ಸೌದಿ ಅರೇಬಿಯಾದ ರಿಯಾದ್ ನಿಂದ ಮಂಗಳೂರಿಗೆ ಬರಲು ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ ಮುಂಬೈನ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ಪರಿಶೀಲಿಸಿ ಆತನ ವಿರುದ್ಧ ಲುಕ್ ಔಟ್ ನೋಟೀಸು (LOC) ಹೊರಡಿಸಿದ ಬಗ್ಗೆ ಖಚಿತಪಡಿಸಿಕೊಂಡು ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಗೆ ಇಮಿಗ್ರೇಷನ್ ಅಧಿಕಾರಿಗಳು ಮಾಹಿತಿ ನೀಡಿದ್ದರು. ಈ ಮಾಹಿತಿಯಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಮುಂಬೈ ವಿಮಾನ ನಿಲ್ದಾಣಕ್ಕೆ ತೆರಳಿ ಆತನನು ವಶಕ್ಕೆ ಪಡೆದು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ತೌಸೀಫ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು