4:19 PM Friday27 - February 2026
ಬ್ರೇಕಿಂಗ್ ನ್ಯೂಸ್
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು…

ಇತ್ತೀಚಿನ ಸುದ್ದಿ

‘ಡೋಂಗಿ ಡೋಂಗಿ’ ; ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ

27/07/2022, 13:59

ಮಂಗಳೂರು(Reporterkarnataka.com): ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆದು, ಪ್ರವೀಣ್ ನೆಟ್ಟಾರು ಅಂತಿಮ ದರ್ಶನದ ವೇಳೆ ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ ಕೇಳಿಬಂದಿತು.

ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ಮೃತದೇಹ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹಾಗೂ ಸಚಿವ ಅಂಗಾರ ಅವರನ್ನು ಸುತ್ತುವರೆದ ಕಾರ್ಯಕರ್ತರು ‘ಡೋಂಗಿ ಡೋಂಗಿ’ ಎಂದು ಧಿಕ್ಕಾರ ಕೂಗಿದರು.

ಕಾರ್ಯಕರ್ತರ ಆಕ್ರೋಶಕ್ಕೆ ಕಂಗಾಲಾದ ಸಚಿವರು ಕುಳಿತಲ್ಲೇ ಕೈಕಟ್ಟಿ ಮೌನಕ್ಕೆ ಶರಣಾದರು. ಬಿಜೆಪಿ ಹಾಗೂ ಸಂಘಪರಿವಾರದ ಹಲವು ನಾಯಕರು ಕಾರ್ಯಕರ್ತರನ್ನು ಸಮಾಧಾನಿಸಿದರೂ ಹಲವು ಕಾರ್ಯಕರ್ತರು ಕಿರುಚಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಸಹಿತ, ಸಂಸದ ನಳಿನ್ ಕುಮಾರ್ ಆದಿಯಾಗಿ ಸಚಿವರು ಕಾರ್ಯಕರ್ತರನ್ನು ಸಮಾಧಾನಿಸಲು ಯತ್ನಿಸಿದರೂ ಕೇಳದ ಕಾರ್ಯಕರ್ತರು ಬಿಜೆಪಿಗೆ ಧಿಕ್ಕಾರ ಕೂಗಿದರು.
ಪೊಲೀಸರು ಸಹ ಯಾರನ್ನು ಸಮಾಧಾನಿಸಲು ಯತ್ನಿಸಿದರೂ ಯಾರು ಕೇಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು