8:38 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

2 ಸಾವಿರ ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಎಚ್ಚರಿಕೆ

06/04/2026, 14:55

ಬಾಗಲಕೋಟೆ(reporterkarnataka.com): ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾಲದ ಹೊರೆ ಹೆಚ್ಚಿಸುತ್ತವೆ ಎಂದು ಅವರು ಎಚ್ಚರಿಸಿದರು.
ಪ್ರಸ್ತುತ ಸರ್ಕಾರವು 8.17 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರನ್ನು ಟೀಕಿಸಿದ ಕುಮಾರಸ್ವಾಮಿ, ಅವರ ಪುತ್ರನನ್ನು ರಾಜಕೀಯಕ್ಕೆ ತಂದಿರುವುದನ್ನು ಪ್ರಶ್ನಿಸಿದರು. ಅಹಿಂದ ಸಮುದಾಯದ ಹೆಸರನ್ನು ಅಧಿಕಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಬೆಳಕಿಗೆ ಬಂದ ವಾಲ್ಮೀಕಿ ಅಭಿವೃದ್ಧಿ ನಿಗಮದ 87 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆ ಎಂದು ಹೇಳಿದರು.
ವೀರಣ್ಣ ಚರಂತಿಮಠ ಅವರನ್ನು ಶಿಕ್ಷಣ ತಜ್ಞ ಎಂದು ಶ್ಲಾಘಿಸಿದ ಕುಮಾರಸ್ವಾಮಿ, ಅವರು ಈ ಭಾಗದ ಅನೇಕ ಕುಟುಂಬಗಳ ಮಕ್ಕಳಿಗೆ ವಿದ್ಯೆ ನೀಡಿ ಬದುಕಿಗೆ ದಾರಿ ತೋರಿದ್ದಾರೆ ಎಂದರು. ರಾಜ್ಯದ ಗೌರವವನ್ನು ಉಳಿಸಲು ಮತ್ತು ಉತ್ತಮ ಆಡಳಿತಕ್ಕಾಗಿ ಚರಂತಿಮಠ ಅವರನ್ನು ಆಯ್ಕೆ ಮಾಡುವಂತೆ ಬಾಗಲಕೋಟೆ ಮತದಾರರಲ್ಲಿ ಕುಮಾರಸ್ವಾಮಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು