8:25 PM Friday20 - February 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ

ಇತ್ತೀಚಿನ ಸುದ್ದಿ

ಭಯ ಬೇಡ, ಕೆಎಂಎಫ್‌ ಉತ್ಪನ್ನಗಳು ತುಂಬಾ ಸೇಫ್‌: ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ

20/02/2026, 20:20

ಬೆಂಗಳೂರು(reporterkarnataka.com): ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್​​ ಕೆಎಂಎಫ್​​ ಉತ್ಪನ್ನಗಳು ಸೇವಿಸಿದರೆ ಕ್ಯಾನ್ಸರ್​ ಬರುತ್ತದೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಜನ ಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಇದು ಶುದ್ಧ ಸುಳ್ಳು ಎಂದಿದ್ದಾರೆ. ಜೊತೆಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.​

*ಆರೋಪ ಶುದ್ಧ ಸುಳ್ಳು ಎಂದ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ:*
ಕೆಎಂಎಫ್‌ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತೆ ಅಂತಾ ಡಾ.ಶರಣ್ಯ ಸಂತೋಷ್‌ ಎಂಬುವವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಇನ್ನು ಈ ಬಗ್ಗೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಮಾತನಾಡಿದ್ದು, ಇದು ಶುದ್ಧ ಸುಳ್ಳು ಕೆಎಂಎಫ್‌ ಉತ್ಪನ್ನ ನೈಸರ್ಗಿಕವಾಗಿ ತಯಾರಿಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದುವರೆಗೂ ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಕೆಎಂಎಫ್‌ ಉತ್ಪನ್ನಗಳಿಗೆ ಯಾವುದೇ ಕೆಮಿಕಲ್ ಹಾಕಲ್ಲ. ಈಗಾಗಲೇ ಡಾ.ಶರಣ್ಯ ಸಂತೋಷ್‌ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ, ಜನರ ದಿಕ್ಕು ತಪ್ಪಿಸುವ ಕೆಲಸಬೇಡ. ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರೆ ಕ್ರಮಕೈಗೊಳ್ಳಲಾಗುತ್ತದೆ. ಕೆಎಂಎಫ್‌ ಉತ್ಪನ್ನಗಳು ತುಂಬಾ ಸೇಫ್‌, ಯಾವುದೇ ಭಯವಿಲ್ಲದೆ ಬಳಸುವಂತೆ ಗ್ರಾಹಕರಿಗೆ ಬಿ.ಶಿವಸ್ವಾಮಿ ಮನವಿ ಮಾಡಿದ್ದಾರೆ.

*ಕೆಎಂಎಫ್​​ನ ಎಲ್ಲಾ ಉತ್ಪನ್ನಗಳು ಸೇಫ್​*
ಕೆಎಂಎಫ್ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಉತ್ಪನ್ನಗಳು ಸೇಫ್​​ ಎಂಬ ವರದಿ ಬಂದಿದೆ. ಮೈಸೂರು ಪಾಕ್, ಮಿಲ್ಕ್ ಪೇಡಾ, ಪನ್ನೀರ್, ವೆನಿಲಾ ಮಿಲ್ಕ್ ಸೇಕ್​​ ಸೇರಿದಂತೆ ಎಲ್ಲಾ ಉತ್ಪನ್ನಗಳು ಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು