2:55 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ; 10 ಸಾವಿರ ದಂಡ

01/03/2025, 23:04

ಬೆಂಗಳೂರು (reporterkarnataka.com:
2020ರ ಅಕ್ಟೋಬರ್ 18 ರಂದು ಬೆಳಗಿನ 8 ಗಂಟೆಯ ಸುಮಾರಿನಲ್ಲಿ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಬಾಳೆ ಮಂಡಿಯೊಂದರಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿ ಎಂ.ಗಣೇಶ್ ಮನೋಹರ್(40)ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ 67ನೇ ಸಿಸಿಹೆಚ್ ನ್ಯಾಯಾಲಯದ ಅಪರ ಜಿಲ್ಲಾ ನ್ಯಾಯಾಧೀಶರಾದ ಎ‌. ಜಯಪ್ರಕಾಶ್ ತೀರ್ಪು ನೀಡಿದ್ದಾರೆ.
2020ರ ಅಕ್ಟೋಬರ್ 18 ರಂದು ಯಾವುದೇ ಉದ್ದೇಶವಿಲ್ಲದೇ, ಏಕಾಏಕಿ ಉದ್ವೇಗಕ್ಕೆ ಒಳಗಾದ ಎಂ.ಗಣೇಶ್ ಮನೋಹರ್ ಎಂಬ ಆರೋಪಿಯು, ಕಾಟನ್‌ಪೇಟೆಯ ಬಾಳೆ ಮಂಡಿಯೊಂದರಲ್ಲಿ ಅಂಜನಪ್ಪ ಗಾರ್ಡನ್ ನಿವಾಸಿ ಮಾರಿ ಬಿನ್ ರಾಮಮೂರ್ತಿ(34) ಹಾಗೂ ಮೈಸೂರು ರಸ್ತೆ ಫ್ಲವರ್ ಗಾರ್ಡನ್ ನಿವಾಸಿ ರಾಜೇಶ್ ಬಿನ್ ರಾಮು ಎಂಬುವರಿಗೆ ಚಾಕುವಿನಿಂದ ಇರಿದಿದ್ದರು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದರು . ಇದೇ ಘಟನೆಯಲ್ಲಿ 4-5 ಜನರು ಗಾಯಗೊಂಡಿದ್ದರು. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಸ್.ಪಾಟೀಲ್ ಅವರು ವಾದ ಮಂಡಿಸಿ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಶಿಕ್ಷೆ ವಿಧಿಸಿದೆ.
ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು