8:14 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಅವಮಾನ ಖಂಡಿಸಿ ಅಥಣಿ ಸಂಪೂರ್ಣ ಬಂದ್: ಮೆರವಣಿಗೆ, ಮಾನವ ಸರಪಳಿ

01/02/2022, 16:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಯಚೂರಿನಲ್ಲಿ ಗಣರಾಜ್ಯೋತ್ಸವ ದಿನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಯುವವರೆಗೆ  ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಘಟನೆಯನ್ನ ಖಂಡಿಸಿ ಇಂದು ಅಥಣಿ ಸಂಪೂರ್ಣ ಬಂದ್ ಆಚರಿಸಲಾಯಿತು.ವಿವಿಧ ದಲಿತ ಸಂಘಟನೆಗಳು ನೀಡಿದ ಕರೆಯನ್ವಯ ಅಥಣಿ ಸಂಪೂರ್ಣ ಬಂದ್ ಮಾಡಲಾಯಿತು.


ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್  ಮೂರ್ತಿಗೆ ಹಾರ ಹಾಕುವದರ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯನ್ನು ಡಾ.ಬಿ‌.ಆರ್.ಅಂಬೇಡ್ಕರ್ ವೃತ್ತದಿಂದ ಬಜಾರ ಪೇಟ, ಸೀರಿ ಬಜಾರ, ಬುಧವಾರ ಪೇಟ, ಬಸವೇಶ್ವರ ವೃತ್ತದಿಂದ ಮುಖಾಂತರ ಹಾಯ್ದು ಮೀರಜ್- ಕಾಗವಾಡ ರಸ್ತೆಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡು ಮಾನವಳಿ ಸರಪಳಿ ನಿರ್ಮಿಸಿ ರಾಯಚೂರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ದ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು

ಶಶಿಕಾಂತ್ ಪಡಸಲಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷರು ಮಾತನಾಡಿ ಪ್ರತಿಯೊಬ್ಬ ಈ ದೇಶದ ವ್ಯಕ್ತಿಯು ಸಮಾನಂತರವಾಗಿ ಹಾಗೂ ಸಾಮರಸ್ಯವಾಗಿರಲು

ಅಂತಹ ಸಂವಿಧಾನ ಬರೆದ ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ನ್ಯಾಯಾಧೀಶರನ್ನು ಕೂಡಲೇ ಅಮಾನತು ಮಾಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.


ನಂತರ ಮಾತನಾಡಿದ ಪೌರ ಕಾರ್ಮಿಕ ಜಿಲ್ಲಾ ಅಧ್ಯಕ್ಷ  ಬಸವರಾಜ್ ಕಾಂಬ್ಳೆ,.. ರಾಯಚೂರಿನಲ್ಲಿ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಒಬ್ಬ ನ್ಯಾಯ ಕೊಡುವಂಥ ವ್ಯಕ್ತಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಯುವವರೆಗೆ ಕಾರ್ಯಕ್ರಮಕ್ಕೆ ಬರುವದಿಲ್ಲ ಎಂದು ಹೇಳಿ ಡಾ.ಬಾಬಾಸಾಹೇಬರಿಗೆ ಅವಮಾನ ಮಾಡಿದ್ದಾರೆ ಕೂಡಲೇ ಅವರನ್ನ ಅವರ ಸ್ಥಾನದಿಂದ ವಜಾಮಾಡಬೇಕು ಅಷ್ಟೇ ಅಲ್ಲದೇ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಿ ದೇಶ ದ್ರೋಹದ ಮೇಲೆ ಗಡಿಪಾರು ಮಾಡಬೇಕು ಅವರನ್ನ ವಜಾ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲ ಸಂಘಟನೆಗಳು  ಸೇರಿ ಬೃಹತ್ ಪ್ರಮಾಣ ಪ್ರತಿಭಟನೆ ಮಾಡಲಾಗುವದು ಅಷ್ಟೇ ಅಲ್ಲದೇ ಘಟನೆ ನಡೆದು ಹಲವು ದಿನ ಕಳೆದರೂ ಸರ್ಕಾರ ಮೌನ ವಹಿಸಿದೆ ಒಂದು ವೇಳೆ ನ್ಯಾಯಾದೀಶನ ಮೇಲೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವದು ಎಂದರು

ಈ ವೇಳೆ ವಿವಿಧ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು