4:01 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

11/06/2026, 20:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಈ ಪ್ರಕಟಣೆ ದಿನಾಂಕದಿಂದ ಮಾರಾಟ, ಖರೀದಿ ಹಾಗೂ ಶೇಖರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈಗಾಗಲೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ (ಕವರ್, ಇಯರ್ ಬಡ್ಸ್, ಸ್ಟ್ರಾ ಪೈಪ್, ಕ್ಯಾಂಡಿ ಮತ್ತು ಐಸ್ ಕ್ರೀಮ್ ಕಡ್ಡಿಗಳು, ಅಲಂಕಾರ ವಸ್ತುಗಳು, ಪ್ಯಾಕಿಂಗ್ ಸಾಮಾಗ್ರಿಗಳು, ಆಮಂತ್ರಣ ಪತ್ರಿಕೆಗಳು ಹಾಗೂ ಇತ್ಯಾದಿ) ಸಹ ನಿಷೇಧಿಸಿರುವುದರಿಂದ ಸಾರ್ವಜನಿಕರು, ಉದ್ದಿಮೆದಾರರು ಹಾಗೂ ಪ್ರವಾಸಿಗರು ಬಳಸದಂತೆ ಕೋರಲಾಗಿದೆ.
ಆದರಿಂದ ಉದ್ದಿಮೆದಾರರು ತಕ್ಷಣದಿಂದ ಜಾರಿಗೆ ಬರುವಂತೆ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಮಾರಾಟ ಹಾಗೂ ಸಂಗ್ರಹಿಸದಂತೆ ಹಾಗೆಯೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡದಂತೆ, ಸಂಗ್ರಹಿಸುವುದನ್ನು ಕೂಡಲೇ ಸ್ಥಗಿತಗೊಳಿಸುವುದು ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು