ಇತ್ತೀಚಿನ ಸುದ್ದಿ
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು
09/03/2025, 18:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ತಾಲ್ಲೂಕಿನ ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಇಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ.
ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಸುದ್ಧಿ ತಿಳಿದು ಸ್ಥಳೀಯರು ಕೂಡ ಕೂಡಲೇ ನೆರವಿಗೆ ಧಾವಿಸಿದ್ದರು.
ಈ ಅಪಘಾತಕ್ಕೆ ನಿಖರವಾದ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.