4:58 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಡ್ರಗ್ಸ್ ಪ್ರಕರಣ: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 40 ಕೇಸ್ ದಾಖಲು; 67 ಮಂದಿ ಬಂಧನ

12/07/2025, 00:02

ಮಂಗಳೂರು(reporterkarnataka.com): ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ/ಸಾಗಟ ಮಾಡುವವರ ವಿರುದ್ಧ 2025ನೇ ಸಾಲಿನಲ್ಲಿ ಇದುವರೆಗೆ 40 ಪ್ರಕರಣ ದಾಖಲಿಸಿ 67 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿವಿಧ ಆರೋಪಿಗಳಿಂದ ಆರೋಪಿಗಳಿಂದ 1.36 ಕೋಟಿ ರೂ. ಮೌಲ್ಯದ 145.324 ಕೆ.ಜಿ.ಗಾಂಜಾ, 319ಗ್ರಾಂ ಎಂಡಿಎಂಎ, 13 ಗ್ರಾಂ ಎಂ.ಡಿ.ಎಂ.ಎ ಪಿಲ್ಸ್, 756 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಇತರ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಲಾಗಿದೆ. ಅದೇ ರೀತಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ 2025ನೇ ಸಾಲಿನಲ್ಲಿ 335 ಪ್ರಕರಣಗಳನ್ನು ದಾಖಲಿಸಿ 376 ಮಂದಿಯನ್ನು ಬಂಧಿಸಲಾಗಿದೆ.
ನ್ಯಾಯಾಲಯದ ಅನುಮತಿ ಪಡೆದು ಮಂಗಳೂರು ನಗರ ವ್ಯಾಪ್ತಿಯ 9 ಠಾಣೆಗಳ ಒಟ್ಟು 23 ಪ್ರಕರಣಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ 21.320 ಕೆ.ಜಿ. ಗಾಂಜಾ ಮತ್ತು 60 ಗ್ರಾಂ ಎಂ.ಡಿ.ಎಂ.ಎ.ಯನ್ನು ಮೂಲ್ಕಿಯ ಕೊಲ್ನಾಡು ಕೈಗಾರಿಕ ಪ್ರದೇಶದಲ್ಲಿರುವ ರಿಸಸ್ಟೈನೆಬಿಲಿಟಿ ಹೆಲ್ತ್ ಕೇರ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಗುರುವಾರ ಬೆಳಗ್ಗೆ ನಾಶ ಪಡಿಸಲಾಗಿದೆ.
ಈ ಹಿಂದೆ ಜ.15ರಂದು ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಾದಕ ಸೊತ್ತುಗಳನ್ನು ನಾಶ ಮಾಡಲಾಗಿತ್ತು. ಆಗ ಒಟ್ಟು 6.80 ಕೋ.ರೂ. ಮೌಲ್ಯದ 335 ಕೆ.ಜಿ. ಗಾಂಜಾ, 7.640 ಕೆ.ಜಿ. ಎಂ.ಡಿ.ಎಂ.ಎ. ಮತ್ತು 16 ಗ್ರಾಂ.ಕೊ ಕೇನ್ ಮಾದಕ ವಸ್ತುಗಳನ್ನು ಈಗಾಗಲೇ ನಾಶ ಮಾಡಿ ವಿಲೇವಾರಿ ಮಾಡಲಾಗಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು