12:44 PM Sunday29 - November 2026
ಬ್ರೇಕಿಂಗ್ ನ್ಯೂಸ್
ನಶಾಮುಕ್ತ ಯುವಜನತೆಯು ವಿಕಸಿತ ಭಾರತದ ಭದ್ರ ಬುನಾದಿ: ರಾಜ್ಯಪಾಲರಾದ ಡಾ. ಸುಧಾ ಯಾದವ್ ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ…

ಇತ್ತೀಚಿನ ಸುದ್ದಿ

ನಶಾಮುಕ್ತ ಯುವಜನತೆಯು ವಿಕಸಿತ ಭಾರತದ ಭದ್ರ ಬುನಾದಿ: ರಾಜ್ಯಪಾಲರಾದ ಡಾ. ಸುಧಾ ಯಾದವ್

29/11/2026, 12:43

ಬೆಂಗಳೂರು(repprterkarnataka.com):ಯುವಜನತೆಯನ್ನು ಮಾದಕ ದ್ರವ್ಯಗಳ ವ್ಯಸನದಿಂದ ಮುಕ್ತಗೊಳಿಸಿ, ಆರೋಗ್ಯಕರ ಹಾಗೂ ಸಶಕ್ತ ಸಮಾಜ ನಿರ್ಮಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ರಾಜ್ಯಪಾಲರಾದ ಡಾ. ಸುಧಾ ಯಾದವ್ ಹೇಳಿದರು.

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಅಹಿಂಸಾ ವಿಶ್ವ ಭಾರತಿ ಸಂಸ್ಥೆಯ 21ನೇ ಸಂಸ್ಥಾಪನಾ ದಿನಾಚರಣೆ ಹಾಗೂ ‘ಶಾಂತಿ, ಸೌಹಾರ್ದತೆ, ಅಭಿವೃದ್ಧಿ ಮತ್ತು ಜಾಗತಿಕ ಶಾಂತಿ’ ವಿಷಯದ ಕುರಿತು ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
” ದೇಶದ ಹಲವು ಭಾಗಗಳಲ್ಲಿ ಯುವಜನರು ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿದ್ದು, ಪಂಜಾಬ್, ಹರಿಯಾಣ, ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇದು ಗಂಭೀರ ಸಾಮಾಜಿಕ ಸವಾಲಾಗಿ ಪರಿಣಮಿಸುತ್ತಿದೆ. ಯುವಜನರಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನದ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ನಶಾಮುಕ್ತ ಭಾರತ ನಿರ್ಮಾಣದ ರಾಷ್ಟ್ರೀಯ ಅಭಿಯಾನಕ್ಕೆ ತಮ್ಮ ಆಧ್ಯಾತ್ಮಿಕ ಮಾರ್ಗದರ್ಶನ ಮತ್ತು ಪ್ರಭಾವಶಾಲಿ ಸಂದೇಶದ ಮೂಲಕ ಕೈಜೋಡಿಸುವಂತೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರಿಗೆ ವಿಶೇಷ ಮನವಿ ಮಾಡಿದರು.
ಯುವಜನತೆಯನ್ನು ಮಾದಕ ವ್ಯಸನದಿಂದ ದೂರವಿಡುವುದು ಕೇವಲ ಕುಟುಂಬ ಅಥವಾ ಸರ್ಕಾರದ ಜವಾಬ್ದಾರಿಯಲ್ಲ, ಅದು ಇಡೀ ಸಮಾಜದ ಸಾಮೂಹಿಕ ಹೊಣೆಗಾರಿಕೆಯಾಗಿದೆ. ತಮ್ಮ ವಿಚಾರಗಳು ಹಾಗೂ ಆಧ್ಯಾತ್ಮಿಕ ಪ್ರಯತ್ನಗಳ ಮೂಲಕ ಶ್ರೀ ಶ್ರೀ ರವಿಶಂಕರ್ ಜೀ ಅವರು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುತ್ತಿರುವಂತೆಯೇ, ಯುವಜನತೆಯನ್ನು ಮಾದಕ ದ್ರವ್ಯಗಳಿಂದ ದೂರವಿಟ್ಟು ಆರೋಗ್ಯಕರ, ಸಕಾರಾತ್ಮಕ ಹಾಗೂ ಉದ್ದೇಶಪೂರ್ಣ ಜೀವನದತ್ತ ಮುನ್ನಡೆಸುವಲ್ಲಿ ಅವರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಬಲ್ಲದು ಎಂದು ಅವರು ಅಭಿಪ್ರಾಯಪಟ್ಟರು.
2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವಲ್ಲಿ ಯುವಜನತೆಯ ಪಾತ್ರ ನಿರ್ಣಾಯಕವಾಗಿದೆ. ಹೀಗಾಗಿ ದೇಶದ ಭವಿಷ್ಯವನ್ನು ಸುರಕ್ಷಿತವಾಗಿಡಲು ಯುವಜನತೆಯನ್ನು ವ್ಯಸನಮುಕ್ತರನ್ನಾಗಿ, ಆತ್ಮವಿಶ್ವಾಸವುಳ್ಳವರನ್ನಾಗಿ ಹಾಗೂ ಸಕಾರಾತ್ಮಕ ಚಿಂತನೆಯುಳ್ಳವರನ್ನಾಗಿ ರೂಪಿಸುವುದು ಅತ್ಯಗತ್ಯ. ಈ ರಾಷ್ಟ್ರೀಯ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಶ್ರೀ ಶ್ರೀ ರವಿಶಂಕರ್ ಜೀ ಅವರ ಮಾರ್ಗದರ್ಶನ, ಕರೆ ಹಾಗೂ ಸಹಕಾರ ಮಹತ್ವದ ಕೊಡುಗೆ ನೀಡಬಲ್ಲದು ಎಂದು ಅವರು ತಿಳಿಸಿದರು.
ಭಾರತವು ಋಷಿಮುನಿಗಳು ಹಾಗೂ ಮಹಾತ್ಮರ ಪವಿತ್ರ ಭೂಮಿಯಾಗಿದೆ. ಪ್ರೀತಿ, ಸೌಹಾರ್ದತೆ, ಪರಸ್ಪರ ವಿಶ್ವಾಸ, ಅಹಿಂಸೆ ಮತ್ತು ಶಾಂತಿಯ ಮಾರ್ಗದಲ್ಲಿ ಜಗತ್ತನ್ನು ಮುನ್ನಡೆಸುವ ಅಗತ್ಯವಿದೆ. ಇಡೀ ವಿಶ್ವವೇ ಒಂದೇ ಕುಟುಂಬ ಎಂಬ ಭಾವನೆಯೊಂದಿಗೆ ಕಾರ್ಯನಿರ್ವಹಿಸುವ ವಾತಾವರಣ ನಿರ್ಮಾಣವಾಗಬೇಕು ಎಂದು ರಾಜ್ಯಪಾಲರು ಕರೆ ನೀಡಿದರು.
ವಿಶ್ವದಾದ್ಯಂತ ಲಕ್ಷಾಂತರ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಸಲ್ಲಿಸಿರುವ ಸೇವೆಯನ್ನು ಶ್ಲಾಘಿಸಿದ ರಾಜ್ಯಪಾಲರು, ಧ್ಯಾನ ಮತ್ತು ಆಧ್ಯಾತ್ಮಿಕ ಸಾಧನೆಯ ಮೂಲಕ ವಿಶೇಷವಾಗಿ ಯುವ ಪೀಳಿಗೆಗೆ ಮಾನಸಿಕ ಶಾಂತಿ, ಆತ್ಮವಿಶ್ವಾಸ ಹಾಗೂ ಜೀವನದಲ್ಲಿ ಸರಿಯಾದ ದಿಕ್ಕನ್ನು ಕಂಡುಕೊಳ್ಳಲು ಅವರು ಪ್ರೇರಣೆ ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಲ ಸಂರಕ್ಷಣೆಯ ಕುರಿತು ಮಾತನಾಡಿದ ರಾಜ್ಯಪಾಲರು, ಮಹಾರಾಷ್ಟ್ರದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಕೈಗೊಂಡಿರುವ ಜಲ ಸಂರಕ್ಷಣಾ ಪ್ರಯತ್ನಗಳನ್ನು ಪ್ರಶಂಸೆ ವ್ಯಕ್ತಪಡಿಸಿ, ಮಹಾರಾಷ್ಟ್ರ, ಕರ್ನಾಟಕ, ರಾಜಸ್ಥಾನ ಮತ್ತು ಹರಿಯಾಣ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಜಲಕ್ಷಾಮ ಗಂಭೀರ ಸವಾಲಾಗಿದೆ. ಜಲ ಸಂರಕ್ಷಣೆ ಕೇವಲ ಚರ್ಚೆಗೆ ಸೀಮಿತವಾಗದೆ, ಈ ನಿಟ್ಟಿನಲ್ಲಿ ಪರಿಣಾಮಕಾರಿ ಕಾರ್ಯಗಳು ಹಾಗೂ ಸಾಮೂಹಿಕ ಪ್ರಯತ್ನಗಳು ನಡೆಯಬೇಕು ಎಂದು ಅವರು ಹೇಳಿದರು.


ಕಾರ್ಯಕ್ರಮಕ್ಕೆ ಆಹ್ವಾನಿಸಿದ ಆಚಾರ್ಯ ಲೋಕೇಶ್ ಗುರೂಜಿ ಅವರಿಗೆ ರಾಜ್ಯಪಾಲರು ವಿಶೇಷ ಕೃತಜ್ಞತೆ ಸಲ್ಲಿಸಿದರು. ಇಬ್ಬರೂ ಆಧ್ಯಾತ್ಮಿಕ ಗುರುಗಳ ಆಶೀರ್ವಾದ ಪಡೆಯುತ್ತಿರುವುದು ತಮ್ಮ ಸೌಭಾಗ್ಯ ಎಂದು ತಿಳಿಸಿದ ಅವರು, ಅವರ ಮಾರ್ಗದರ್ಶನ ಮತ್ತು ಸಹಕಾರದಿಂದ ಕರ್ನಾಟಕದಲ್ಲಿಯೂ ಸಮಾಜಮುಖಿ ಹಾಗೂ ಸಕಾರಾತ್ಮಕ ಕಾರ್ಯಗಳನ್ನು ಮತ್ತಷ್ಟು ಮುನ್ನಡೆಸಲು ಪ್ರೇರಣೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಶ್ರೀ ರವಿಶಂಕರ್ ಜೀ, ಆಚಾರ್ಯ ಲೋಕೇಶ್ ಜೀ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು