12:21 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಡ್ರಗ್ಸ್ ಪೆಡ್ಲರ್ ಗಳ ಮೇಲೆ ಕಠಿಣ ಕ್ರಮ: ಉಡುಪಿ ಎಸ್ಪಿ ಖಡಕ್ ಎಚ್ಚರಿಕೆ

24/02/2023, 23:34

ಉಡುಪಿ(reporterkarnataka.com): ಮಣಿಪಾಲ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳ ಅಮಾನತು ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಇಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ರು. ಡ್ರಗ್ಸ್ ಪೆಡ್ಲರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಈ ಕಾರ್ಯಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್ ಗಳನ್ನ ವಶಕ್ಕೆ ತೆಗೆದುಕೊಂಡಿದ್ದೇವೆ. ಮಾಹೆಯ ಕೆಲ ವಿದ್ಯಾರ್ಥಿಗಳು ಕೂಡ ಪೆಡ್ಲರ್ ಗಳಾಗಿದ್ದು, ಅವರಿಂದ ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳು ಪತ್ತೆಯಾಗಿತ್ತು. ಈ ಪ್ರಕರಣ ಬಗ್ಗೆ ನಾವು ವಿವಿಗೆ ಮಾಹಿತಿ ನೀಡಿದ್ದೆವು ಎಂದರು.

ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ಡ್ರಗ್ಸ್ ವ್ಯವಹಾರ ನಡೆದ ಬಗ್ಗೆ ವಿದ್ಯಾರ್ಥಿಗಳನ್ನು ಗುರುತಿಸಿ ಪಟ್ಟಿ ನೀಡಿದ್ದೇವೆ. ಟೆಸ್ಟಿಂಗ್ ಮೂಲಕ ಸಾಬೀತಾಗಿರುವ ಪ್ರಕರಣಗಳ ವಿವರ ಕೂಡ ವಿವಿಗೆ ನೀಡಿದ್ದೇವೆ. ಮಣಿಪಾಲ ವಿವಿ ಈ ವಿಚಾರಗಳಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದೀಗ ಮಣಿಪಾಲ ವಿವಿ 42 ಮಂದಿಯನ್ನು ಅಮಾನತು ಮಾಡಿದೆ. ಈ ವಿಚಾರದಲ್ಲಿ ಪೊಲೀಸ್ ಇಲಾಖೆಯಾಗಲಿ ವಿವಿಯಾಗಲಿ ನಿರ್ಲಕ್ಷ ವಹಿಸುವುದಿಲ್ಲ ಅನ್ನೋ ಸಂದೇಶ ರವಾನೆಯಾಗಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು