4:36 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಹಿಳೆಯರ ಖಾಸಗಿ ಅಂಗದಲ್ಲಿ ಡ್ರಗ್ಸ್ ಸಾಗಣೆ: ಯುವತಿಯರು ಸೇರಿ ಏಳು ಜನ ಬಂಧನ

28/06/2026, 16:58

ತಿರುವನಂತಪುರಂ(reportekarnataka.com): ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ಖಾಸಗಿ ಅಂಗದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್‌ ಸಾಗಿಸುತ್ತಿದ್ದ ವೇಳೆ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರು ಸೇರಿದಂತೆ ಒಟ್ಟು ಏಳು ಮಂದಿ ಅಂತರರಾಜ್ಯ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಕೇರಳ ಮಾದಕ ದ್ರವ್ಯ ವಿಶೇಷ ಕಾರ್ಯಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 308 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದ್ದು, ಇದು ಇತ್ತೀಚಿನ ದಿನಗಳಲ್ಲಿ ಕೇರಳಂನಲ್ಲಿ ನಡೆದ ಅತಿ ದೊಡ್ಡ ಡ್ರಗ್ಸ್ ಜಪ್ತಿಯಾಗಿದೆ.
ಪಾಲಕ್ಕಾಡ್‌ ರೆಸಾರ್ಟ್‌ ಒಂದರಿಂದ ತ್ರಿಶ್ಯೂರ್ ಕಡೆಗೆ ಬರುತ್ತಿದ್ದ ಕಾರನ್ನು ವಾಣಿಯಂಪಾರ ಎಂಬಲ್ಲಿ ಪೊಲೀಸರು ತಡೆದು ತಪಾಸಣೆ ನಡೆಸಿದಾಗ ಈ ಜಾಲ ಬೆಳಕಿಗೆ ಬಂದಿದೆ. ಕಾರಿನಲ್ಲಿದ್ದ ಶಿಫಾಸ್ (26), ವಿದ್ಯಾ (28), ಜಿಷ್ಣು (27) ಮತ್ತು ಶ್ರೀಲಕ್ಷ್ಮಿ (20) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ತದನಂತರ ಶಬೀರ್ (34), ಅನ್ಶಾದ್ (31) ಮತ್ತು ಟಿ.ಟಿ. ಸುಮೇಶ್ (25) ಎಂಬುವವರನ್ನು ಬಂಧಿಸಲಾಗಿದೆ.
ಡ್ರಗ್ಸ್ ಪತ್ತೆಯಾದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಮುಖ ಆರೋಪಿ ಶಿಫಾಸ್‌ನ ಮನೆಗೆ ದಾಳಿ ನಡೆಸಿ ಹೆಚ್ಚುವರಿ 18 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಯಿತು. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು