9:01 AM Tuesday23 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಡ್ರಗ್ಸ್  ವಿರುದ್ಧ ವಿಶೇಷ ಕಾರ್ಯಾಚರಣೆ: ಉಡುಪಿ ಜಿಲ್ಲೆಯಲ್ಲಿ 40 ಮಂದಿ ವಶಕ್ಕೆ; ಪ್ರಕರಣ ದಾಖಲು

24/08/2022, 20:58

ಉಡುಪಿ(reporterkarnataka.com): ಮಾದಕ ದ್ರವ್ಯದ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ ಒಟ್ಟು 40 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಆ.20ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಬಳಿ ವಿನಯ ನಗರದ ಮುಸ್ತಾಫ್ (30), ಅಶ್ರಫ್(35), ಉಡುಪಿ ನಗರ ಠಾಣಾ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಅನಂತಕೃಷ್ಣ ನಗರದ ಬಳಿ ಸ್ಥಳೀಯ ನಿವಾಸಿ ಇರ್ಷಾದ್ ಖಾನ್(32), ನಗರದ ಬೋರ್ಡ್ ಹೈಸ್ಕೂಲ್ ಬಳಿ ಶಿರಿಬೀಡುವಿನ ಶರ್ವೀನ್ (20), ಕುಂಜಿಬೆಟ್ಟು ಎಂಜಿಎಂ ಕಾಲೇಜು ಎದುರು ಮಾರ್ಪಳ್ಳಿಯ ಸಮೀದ್ (20) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆ.21ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಜಂಕ್ಷನ್ ಬಳಿ ರೋಬನ್ ಡಿ ಅಲ್ಮೇಡಾ(21), ಉಡುಪಿ ಸೆನ್ ಪೊಲೀಸರು ಕಾರ್ಕಳ ರಾಮಸಮುದ್ರ ಕೆರೆಯ ಬಳಿ ಮಟ್ಪಾಡಿ ಗ್ರಾಮದ ಯೊಗೀಶ್ ಗಾಣಿಗ(25), ಶಿವಮೊಗ್ಗ ಜಿಲ್ಲೆಯ ಹೊಸನಗರದ ಶ್ರೇಯಸ್(20), ಕೊಪ್ಪ ತಾಲೂಕಿನ ನಂದೀಶ್(22) ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಇವರೆಲ್ಲ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರಾಂತ್ಯದಲ್ಲಿ ಮಾದಕ ದ್ರವ್ಯದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ಒಟ್ಟು 40 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರವಾಸಿ ತಾಣಗಳು, ಶಿಕ್ಷಣ ಸಂಸ್ಥೆಗಳ ಪರಿಸರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿಯಾಗಿ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು