7:47 PM Sunday16 - March 2025
ಬ್ರೇಕಿಂಗ್ ನ್ಯೂಸ್
ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.… ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ… VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ…

ಇತ್ತೀಚಿನ ಸುದ್ದಿ

Drugs | ರಾಜ್ಯದ ಇತಿಹಾಸದಲ್ಲೇ ಮಂಗಳೂರು ಪೊಲೀಸರಿಂದ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಸಿಎಂ ಶ್ಲಾಘನೆ

16/03/2025, 19:44

ಬೆಂಗಳೂರು(reporterkarnataka.com):ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಸಿಎಂ ಅವರು ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು