9:27 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕುಡುಕ ಚಾಲಕನಿಂದ ಕಾರು ಚಲಾವಣೆ: ಬಾಲಕಿ ಸ್ಥಳದಲ್ಲೇ ಸಾವು; 7 ಮಂದಿಗೆ ಗಾಯ

15/04/2026, 19:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕುಡುಕ ಕಾರು ಚಾಲಕ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಚಾಲನೆ ಮಾಡಿದ ಪರಿಣಾಮ 7 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 7 ಮಂದಿ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಮೃತ ಬಾಲಕಿಯನ್ನ ಸಾನ್ವಿ(7) ಎಂದು ಗುರುತಿಸಲಾಗಿದೆ.
11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಗಾಯಗೊಂಡಿದ್ದು, ಇವರನ್ನು ಹಾಸನದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸುಧಾಕರ್ ನನ್ನ ಹಿಡಿದು ಸ್ಥಳೀಯರು ಥಳಿಸಿದ್ದಾರೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಮತ್ತೋರ್ವ ಪರಾರಿಯಾಗಿದ್ದಾನೆ.



ಕಾರು ಚಾಲಕನನ್ನ ಜಿಲ್ಲಾಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದಾರೆ. ಕಾರಿನ ಗಾಜುಗಳನ್ನ ಪುಡಿ-ಪುಡಿ ಮಾಡಿ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಮುಂಭಾಗ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ ನೆಲೆಸಿತ್ತು.
ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಆಸ್ಪತ್ರೆ ಮುಂಭಾಗ ಆಕ್ರೋಶಿತರ ನೆರೆದು ಪೊಲೀಸರ ಮಾತು ಕೇಳದೆ ಇದ್ದಾಗ ಸ್ಥಳಕ್ಕೆ ಎಎಸ್ಪಿ ಜಯಕುಮಾರ್ ಭೇಟಿ ನೀಡಿದರು. ಎಎಸ್ಪಿ ಜಯಕುಮಾರ್ ಮುಂದೆ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು