1:27 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ದುಬಾರೆ: ಪ್ರವಾಸಕ್ಕಾಗಿ ಬಂದಿದ್ದ ನಾಸಿಕ್ ನ ತರುಣ ನದಿಯಲ್ಲಿ ಮುಳುಗಿ ದಾರುಣ ಸಾವು

27/04/2022, 09:09

ಕುಶಾಲನಗರ(reporterkarnataka.com): ಪ್ರವಾಸಕ್ಕಾಗಿ ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಾವೇರಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ದುಬಾರೆಯಲ್ಲಿ ಮಂಗಳವಾರ ನಡೆದಿದೆ.

ಮುಂಬೈನ ನಾಸಿಕ್’ನ ನಿವಾಸಿ ದಾದಾಜಿ ಮಹಾಜನ್ ಎಂಬವರ ಪುತ್ರ ಅನಿಕೇತ್ (17) ಎಂಬಾತ ಮೃತ ದುರ್ದೈವಿ.

ಮುಂಬೈನಿಂದ 23 ಮಂದಿ ಪ್ರವಾಸಿಗರು ದುಬಾರೆ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು. ಮಂಗಳವಾರ ನದಿಯಲ್ಲಿ ಈಜಾಡಲು ತೆರಳಿದ ಸಂದರ್ಭ ಯುವಕ ನದಿಯಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೋಟಿಂಗ್ ಚಾಲಕರ ನೆರವಿನಿಂದ ಮೃತ ದೇಹವನ್ನು ನದಿಯಿಂದ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.

ಯುವಕನ ದುರ್ಮರಣದಿಂದಾಗಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.ಯುವಕನ ತಂದೆ ನಾಸಿಕ್’ನಲ್ಲಿ ರೈತರಾಗಿದ್ದು, ಯುವಕ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು