2:33 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’

17/02/2022, 20:57

ಅಬುದಾಬಿ(reporterkarnataka.com):ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ  ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು