6:33 PM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ದುಬೈ: ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ಪಂದ್ಯಾಟ; ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡಕ್ಕೆ ಪ್ರಶಸ್ತಿ

20/06/2023, 12:23

ಮಂಗಳೂರು(reporterkarnataka.com): ದುಬೈನ ಶಬಾಬ್ ಅಲ್ ಅಹ್ಲಿ ಕ್ರೀಡಾಂಗಣದಲ್ಲಿ, ಡಾ. ರಾಜ್ ಕಪ್ ಆರನೇ ಆವೃತ್ತಿಯ ಪೂರ್ವ ಸಿದ್ಧತಾ ಕಾರ್ಯಕ್ರಮದ ಅಂಗವಾಗಿ ನಡೆದ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್’ ಪಂದ್ಯಾಕೂಟವನ್ನು ರಫೀಕ್ ದರ್ಬಾರ್ ಮಾಲೀಕತ್ವದ, ವಸಿಷ್ಠ ಸಿಂಹ ನೇತೃತ್ವದ ‘ತುಳುನಾಡ ಟೈಗರ್ಸ್’ ತಂಡ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಕನ್ನಡ, ತುಳು, ತಮಿಳು, ತೆಲುಗು, ಮಲಯಾಳಂ ಸಿನಿಮಾ ಮತ್ತು ಕಿರುತೆರೆಯ 40ಕ್ಕೂ ಕಲಾವಿದರ 6 ತಂಡಗಳ ನಡುವೆ ನಡೆದ ಪಂದ್ಯಾಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಬಾಕ್ಸ್ ಕ್ರಿಕೆಟ್ ನ ಲೀಗ್ ಹಂತದ ಪಂದ್ಯಗಳಲ್ಲಿ ಗೆದ್ದ ಲೂಸ್ ಮಾದ ಯೋಗಿ ಹಾಗೂ ವಸಿಷ್ಠ ಸಿಂಹ ತಂಡಗಳು ಫೈನಲ್ ಹಂತಕ್ಕೆ ತಲುಪಿ ಪರಸ್ಪರ ಮುಖಾಮುಖಿಯಾದವು.
ಫೈನಲ್ ಪಂದ್ಯದಲ್ಲಿ ನಾಯಕ ಲೂಸ್ ಮಾದ ಯೋಗಿ ನೇತೃತ್ವ ಡಾಲಿ ಧನಂಜಯ, ಪನ್ನಾಗಭರಣ, ಸಿಂಪಲ್ ಸುನಿ ಒಳಗೊಂಡ ಸಮೃದ್ಧಿ ಬೆಂಗಳೂರು ತಂಡವನ್ನು ವಸಿಷ್ಠ ಸಿಂಹ ನೇತೃತ್ವದ ಪೃಥ್ವಿ ಅಂಬಾರ್, ಮಣಿಕಾಂತ್ ಕದ್ರಿ, ಬಿರುವೆರ್ ಕುಡ್ಲದ ಉದಯ ಪೂಜಾರಿ, ರಿಯಾಜ್, ಶಹಾಬುದ್ದೀನ್ ಎರ್ಮಾಳ್ ತಂಡವು ರೋಚಕವಾಗಿ ಸೋಲಿಸಿ ‘ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್ 2023’ ಪ್ರಶಸ್ತಿ ಗೆದ್ದರು.

ತುಳುನಾಡ ಟೈಗರ್ಸ್ ತಂಡದ ಫೈನಲ್ ಪಂದ್ಯದ ಗೆಲುವಿನ ರೂವಾರಿ ಶಹಾಬುದ್ದೀನ್ ಎರ್ಮಾಳ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಉತ್ತಮ ಆಲ್ ರೌಂಡರ್ ಪ್ರದರ್ಶನ ನೀಡಿದ ಪೃಥ್ವಿ ಅಂಬಾರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ತುಳುನಾಡ ಟೈಗರ್ಸ್ ತಂಡದ ಮ್ಯಾನೇಜರ್ ಇಮ್ರಾನ್ ಖಾನ್ ಎರ್ಮಾಳ್, ಪೋಷಕರಾದ ರೊನಾಲ್ಡ್ ಮಾರ್ಟಿಸ್, ಇಸ್ಮಾಯಿಲ್, ಶೆರ್ಲಿ ಅಬ್ರಹಾಂ, ಜಹೀರ್ ಬೈಕಂಪಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಯೋಜಕರಾದ ರಾಜೇಶ್ ಬ್ರಹ್ಮಾವರ, ಸೆಂಥಿಲ್, ಮಮತಾ ಸೆಂಥಿಲ್ ದುಬೈನಲ್ಲಿ ಅತ್ಯುತ್ತಮ ಗುಣಮಟ್ಟದಲ್ಲಿ ಆಯೋಜಿಸಿದ ಈ ಪಂದ್ಯಾವಳಿ ಕಲಾವಿದರ ಬಾಂಧವ್ಯ ಹಾಗೂ ಕ್ರೀಡಾ ಸ್ಫೂರ್ತಿಯ ಹಲವಾರು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು