12:02 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

22/10/2024, 23:49

ಮಂಗಳೂರು(reporterkarnataka.com):ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರಿಗೆ ನೀಡಿ ಗೌರವಿಸಿತು.


35 ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಯ ಶಿರಿಯಾ ಎಂಬ ಸಣ್ಣ ಗ್ರಾಮದಲ್ಲಿ ಡಾ। ಕುನಿಲ್ ಅವರ ಶೈಕ್ಷಣಿಕ ಯಾತ್ರೆಯು ಪ್ರಾರಂಭವಾಯಿತು. ಅಲ್ಲಿ ಅವರು ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಸಮಗ್ರ ಶಿಕ್ಷಣವನ್ನು ನೀಡುವ ಶಾಲೆಯನ್ನು ಸ್ಥಾಪಿಸಿದರು. ಸ್ಥಳೀಯ ಸಮುದಾಯದ ಸಹಕಾರದೊಂದಿಗೆ ಅವರು ಬದಿಯಡ್ಕದಲ್ಲಿ ಎರಡನೇ ಶಾಲೆಯನ್ನು ಸ್ಥಾಪಿಸಿದರು ಹಾಗೂ ಅವರ ನಿರಂತರ ಬೆಂಬಲದಿಂದ ಉತ್ತೇಜಿತರಾಗಿ, ಕರ್ನಾಟಕದ ನಾಟೆಕಲ್’ನಲ್ಲಿ ಮತ್ತು ತುಂಬೆಯಲ್ಲಿ ಕುನಿಲ್ ಶಾಲೆಗಳನ್ನು ವಿಸ್ತರಿಸಿದರು.
ನಾಲ್ಕು ಶಾಲೆಗಳು 7000 ವಿದ್ಯಾರ್ಥಿಗಳಿಗೆ ಪೋಷಕ ಭೂಮಿಯಾಗಿ ಮಾರ್ಪಟ್ಟಿವೆ. 600 ವೃತ್ತಿಪರ ಸಿಬ್ಬಂದಿ ಮತ್ತು 125 ಶಾಲಾ ವಾಹನಗಳೊಂದಿಗೆ ಈ ಶಾಲೆಗಳು ಅತ್ತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. 100% ಫಲಿತಾಂಶವನ್ನು ನಿರಂತರವಾಗಿ ಕುನಿಲ್ ಶಾಲೆಗಳು ಸಾಧಿಸುತ್ತಿವೆ, ಇದು ಡಾ. ಫಖ್ರುದ್ದೀನ್ ಕುನಿಲ್ ಅವರ ಶಿಕ್ಷಣದಲ್ಲಿನ ಶ್ರೇಷ್ಠತೆಯ ಬದ್ಧತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಅನುಮತಿ ದೊರೆತರೆ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರು ಬಿ.ಎ., ಬಿ.ಕಾಂ, ಬಿ.ಎಸ್ಸಿ ಮತ್ತು ಬಿ.ಬಿ.ಎ.ಯಲ್ಲಿ ಪದವಿ ಕೋರ್ಸ್‌ಗಳನ್ನು ಪರಿಚಯಿಸಲು ಯೋಜನೆಯನ್ನು ರೂಪಿಸಿದ್ದಾರೆ. ಇದರಿಂದಾಗಿ ಶೈಕ್ಷಣಿಕ ಅವಕಾಶಗಳನ್ನು ಇನ್ನಷ್ಟು ಸಮೃದ್ಧಗೊಳಿಸಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಕುನಿಲ್ ಗ್ರೂಪ್ ಅಧ್ಯಕ್ಷ ಡಾ। ಫಖ್ರುದ್ದೀನ್ ಕುನಿಲ್, ಕುನಿಲ್ ಗ್ರೂಪ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ರಾಜ್ ಪ್ರಸಾದ್ ನಾಯ್ಕ್, ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು