2:26 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಿ : ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ

28/07/2021, 21:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆ ಹೊಂದಿರುವ ಯಾವುದಾದರೂ ಜನಾಂಗವಿದ್ದರೆ ಅದು ನಮ್ಮ ಮಾದಿಗ ಜನಾಂಗ. ಬಿಜೆಪಿ ಪಕ್ಷದಲ್ಲಿ ನಿಷ್ಠೆ ಹೊಂದಿದ ಪ್ರಾಮಾಣಿಕ ವ್ಯಕ್ತಿ ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಜೇಂದ್ರ ಐಹೊಳೆ ಆಗ್ರಹಿಸಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಬೆಳಗಾವಿ ಜಿಲ್ಲೆಯಲ್ಲಿ ಸತತ ಮೂರು ಬಾರಿ ರಾಯಬಾಗ ಮತಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ದುರ್ಯೋಧನ ಐಹೊಳೆ ಅವರಿಗೆ 2018 ರಲ್ಲಿ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಗದೆ ವಂಚಿತರಾಗಿದ್ದು ಮತ್ತು ಇದುವರೆಗೂ ಇವರನ್ನು ಕೇವಲ ಆದಿಜಾಂಬವ ನಿಗಮದ ಅಧ್ಯಕ್ಷರನ್ನಾಗಿ ಮಾಡಿ ಮಂತ್ರಿ ಮಾಡದೆ ಇವರನ್ನು ವಂಚಿತರನ್ನಾಗಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಜಯ ದೂಳಗಾವಿ, ಮಹಾದೇವ ಮಾದಿ, ಸದಾಶಿವ ಮತಾಳೆ, ವಿಠ್ಠಲ ಅವಳೆ, ಪ್ರಕಾಶ ಹೆಗಣ್ಣವರ, ಬಸವರಾಜ ಹೋಳಿಕಟ್ಟಿ, ಮಹಾವೀರ ಮಾದರ, ಚನ್ನಪ್ಪಾ ಜಗದಾಳೆ, ಮಹಾವೀರ ಆಚಾರಟ್ಟಿ, ರಮೇಶ ಮಾದರ, ಲಕ್ಷ್ಮಣ ಅವಳೆ, ಆನಂದ ದೇವರಮನಿ, ಸಂಗಪ್ಪ ಮಾಯಾನಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು