2:14 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಧ್ವನಿವರ್ಧಕ ಬಳಕೆ: ದೇಗುಲ, ಮಸೀದಿ, ಚರ್ಚ್ ಸೇರಿ ಮಂಗಳೂರಿನಲ್ಲಿ 1001 ಕೇಂದ್ರಗಳಿಗೆ ನೋಟೀಸ್

06/04/2022, 23:33

ಮಂಗಳೂರು(reporterkarnataka.com):  ರಾಜ್ಯ ಹೈಕೋರ್ಟ್ ನ ಆದೇಶದಂತೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಹಗಲು ಹಾಗೂ ರಾತ್ರಿ ಹೊತ್ತಿನಲ್ಲಿ ಇಂತಿಷ್ಟು ಡೆಸಿಬಲ್ ಧ್ವನಿಯನ್ನು ಮಾತ್ರ ಹೊರಡಿಸಬೇಕೆಂಬ ನಿಯಮವಿದೆ. ಈ ಕಾಯ್ದೆ, ನಿಯಮ ಈ ಹಿಂದೆಯೇ ಜಾರಿಯಲ್ಲಿದ್ದು, ಅದನ್ನು ಅನುಷ್ಠಾನ ಮಾಡುವ ಕಾರ್ಯ, ನಿಯಮ ಉಲ್ಲಂಘನೆಯ ಪರಿಶೀಲನೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು. ಈಗಾಗಲೇ ನಗರದಲ್ಲಿ 1001 ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.

ಮಸೀದಿಗಳ ಆಝಾನ್ ಸೇರಿದಂತೆ ಧ್ವನಿವರ್ಧಕ ಬಳಕೆ ಕುರಿತಂತೆ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಇದೀಗ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು ಪೊಲೀಸರು ನೊಟೀಸು ಮೂಲಕ ಸೂಚನೆ ನೀಡುವ ಕಾರ್ಯ ಆರಂಭಿಸಿದ್ದಾರೆ.

ನಗರದಲ್ಲಿ ಈಗಾಗಲೇ ಪ್ರಮುಖ ದೇವಸ್ಥಾನ, ಮಸೀದಿ, ಚರ್ಚ್, ಶಿಕ್ಷಣ ಸಂಸ್ಥೆಗಳು, ಮನರಂಜನಾ ಸ್ಥಳಗಳಿಗೆ ನೋಟೀಸು ನೀಡುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನಗರದಲ್ಲಿ ಪ್ರಾಥಮಿಕ ಹಂತದಲ್ಲಿ ಧ್ವನಿವರ್ಧಕ ಬಳಸುವ 1001 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

ರಾಜ್ಯ ಸರಕಾರ ಹಾಗೂ ಹೈಕೋರ್ಟ್‌ನ ಆದೇಶ ಹಾಗೂ ಹಿರಿಯ ಅಧಿಕಾರಿಗಳು ನೀಡಿರುವ ಮೇರೆಗೆ ಈ ಕ್ರಮ ವಹಿಸಲಾಗಿದ್ದು, ನಗರದಲ್ಲಿ ಧ್ವನಿವರ್ಧಕ ಬಳಸುವ 357 ದೇವಸ್ಥಾನಗಳು, 168 ಮಸೀದಿಗಳು, 95 ಚರ್ಚ್‌ಗಳು, 106 ಶಿಕ್ಷಣ ಸಂಸ್ತೆಗಳು, 60 ಕೈಗಾರಿಕಾ ಸ್ಥಳಗಳು, 98 ಮನರಂಜನಾ ಸ್ಥಳಗಳು, 68 ಮದುವೆ ಹಾಲ್‌ಮತ್ತು ಕಾರ್ಯಕ್ರಮ ಸ್ಥಳಗಳು, ಇತರ 49 ಸಾರ್ವಜನಿಕ ಸ್ಥಳಗಳನ್ನು ಪ್ರಸಕ್ತ ಗುರುತಿಸಿ ಈಗಾಗಲೇ ಧ್ವನಿವರ್ಧಕ ಬಳಕೆಯ ವೇಳೆ ಶಬ್ಧ ಮಾಲಿನ್ಯಕ್ಕೆ ಅವಕಾಶವಾಗದಂತೆ ನಿಯಮ ಪಾಲನೆ ಮಾಡುವಂತೆ ನೋಟೀಸು ನೀಡುವ ಕಾರ್ಯ ಆರಂಭಿಸಲಾಗಿದೆ. ಇನ್ನಷ್ಟು ಧ್ವನಿವರ್ಧಕ ಬಳಕೆಯ ಸ್ಥಳಗಳನ್ನು ಗುರುತಿಸುವ ಪ್ರಕ್ರಿಯೆ ಮುಂದುವರಿದಿದೆ. ಪ್ರಥಮವಾಗಿ ನೋಟೀಸು ನೀಡಿ ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗುತ್ತದೆ. ಸ್ಪಂದಿಸದಿದ್ದರೆ ಮುಂದಿನ ಕಾನೂನು ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು