9:23 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದ್ವಿಚಕ್ರ ವಾಹನ ಕಳ್ಳನ ಸೆರೆ: ನ್ಯಾಯಾಂಗ ಬಂಧನ; 1.10 ಲಕ್ಷ ರೂ. ಮೌಲ್ಯದ ಎರಡು ವಾಹನ ವಶ

23/08/2023, 21:17

ಮಂಗಳೂರು(reporterkarnataka.com):ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ತೊಕ್ಕೊಟ್ಟು ಕಾಫಿಕಾಡು ನಿವಾಸಿಯಾದ ಶನೀಝ್(23) ಬಂಧಿತ ಆರೋಪಿ. ಈತ ಕಳವು ಮಾಡಿದ ಸ್ಕೂಟರ್ ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದಾಗ, ನಗರದ ಪಂಪುವೆಲ್ ಬ್ರಿಡ್ಜ್ ಬಳಿ ಆತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ನಗರದ ಪೂರ್ವ ಪೋಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೊಂಡು, ಆರೋಪಿಯನ್ನು
ಬಂಧಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆತನಿಂದ
ಒಟ್ಟು ಸುಮಾರು 1.10 ಲಕ್ಷ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ಮಂಗಳೂರು ಪೂರ್ವ ಪೊಲೀಸ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ವಶಪಡಿಸಿಕೊಂಡಿರುತ್ತಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು