ಇತ್ತೀಚಿನ ಸುದ್ದಿ
ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದ.ಕ. ಪ್ರಥಮ, ಉಡುಪಿ ದ್ವಿತೀಯ; ನಟಿ ಆರಾಧನಾ ಭಟ್ ಡಿಸ್ಟಿಂಕ್ಷನ್
18/06/2022, 16:11
ಬೆಂಗಳೂರು(reporterkarnataka.com): ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 4,22,966 ವಿದ್ಯಾರ್ಥಿಗಳು(ಶೇ.61.88 ) ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಶೇ.68.72 ಬಾಲಕಿಯರು ಉತ್ತೀರ್ಣರಾಗುವ ಮೇಲುಗೈ ಸಾಧಿಸಿದ್ದಾರೆ. ಚಿತ್ರನಟಿ ಆರಾಧನಾ ಭಟ್ ಡಿಸ್ಟಿಂಕ್ಷನ್ ಪಡೆದಿದ್ದಾಳೆ.
ಶೇ.55.22ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಯ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
2021-22ನೇ ಸಾಲಿನ ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಫಲಿತಾಶ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿವೆ.
ವಿಜಯಪುರ ಮೂರನೇ ಸ್ಥಾನ, ಬೆಂಗಳೂರು ದಕ್ಷಿಣ 4, ಉತ್ತರ ಕನ್ನಡ 5 ನೇ ಸ್ಥಾನ ಗಳಿಸಿದರೆ ಚಿತ್ರದುರ್ಗಾ ಜಿಲ್ಲೆ ಕಡೆಯ ಸ್ಥಾನ ಗಳಿಸಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆದಿತ್ತು. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ಇಲಾಖೆಯ ವೆಬ್ ಸೈಟ್http://karresults.nic.In ಗೆ ಭೇಟಿ ನೀಡಬಹುದಾಗಿದ್ದು 12 ಗಂಟೆಯ ನಂತರ ಫಲಿತಾಂಶ ಲಭ್ಯವಾಗಲಿದೆ.
ನಟಿ, ಮೂಡುಬಿದರೆ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಆರಾಧನ ವಾಣಿಜ್ಯ ವಿಭಾಗದ ರಿಸಲ್ಟ್ ನಲ್ಲಿ ಡಿಸ್ಟಿಂಕ್ಷನ್ ಬಂದಿರುತ್ತಾರೆ. ಶೇ.94 ಅಂಕ ಪಡೆದಿದ್ದಾಳೆ