1:01 AM Thursday29 - October 2026
ಬ್ರೇಕಿಂಗ್ ನ್ಯೂಸ್
4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದ.ಕ. ಪ್ರಥಮ, ಉಡುಪಿ ದ್ವಿತೀಯ; ನಟಿ ಆರಾಧನಾ ಭಟ್ ಡಿಸ್ಟಿಂಕ್ಷನ್

18/06/2022, 16:11

ಬೆಂಗಳೂರು(reporterkarnataka.com): ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 4,22,966 ವಿದ್ಯಾರ್ಥಿಗಳು(ಶೇ.61.88 ) ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಶೇ.68.72 ಬಾಲಕಿಯರು ಉತ್ತೀರ್ಣರಾಗುವ ಮೇಲುಗೈ ಸಾಧಿಸಿದ್ದಾರೆ. ಚಿತ್ರನಟಿ ಆರಾಧನಾ ಭಟ್ ಡಿಸ್ಟಿಂಕ್ಷನ್ ಪಡೆದಿದ್ದಾಳೆ.

ಶೇ.55.22ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಯ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಟ್ವೀಟ್‌ ಮಾಡಿದ್ದಾರೆ.

2021-22ನೇ ಸಾಲಿನ ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಫಲಿತಾಶ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿವೆ.

ವಿಜಯಪುರ ಮೂರನೇ ಸ್ಥಾನ, ಬೆಂಗಳೂರು ದಕ್ಷಿಣ 4, ಉತ್ತರ ಕನ್ನಡ 5 ನೇ ಸ್ಥಾನ ಗಳಿಸಿದರೆ ಚಿತ್ರದುರ್ಗಾ ಜಿಲ್ಲೆ ಕಡೆಯ ಸ್ಥಾನ ಗಳಿಸಿದೆ.

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆದಿತ್ತು. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ಇಲಾಖೆಯ ವೆಬ್‌ ಸೈಟ್‌http://karresults.nic.In ಗೆ ಭೇಟಿ ನೀಡಬಹುದಾಗಿದ್ದು 12 ಗಂಟೆಯ ನಂತರ ಫಲಿತಾಂಶ ಲಭ್ಯವಾಗಲಿದೆ.

ನಟಿ, ಮೂಡುಬಿದರೆ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಆರಾಧನ  ವಾಣಿಜ್ಯ ವಿಭಾಗದ ರಿಸಲ್ಟ್ ನಲ್ಲಿ ಡಿಸ್ಟಿಂಕ್ಷನ್ ಬಂದಿರುತ್ತಾರೆ. ಶೇ.94 ಅಂಕ ಪಡೆದಿದ್ದಾಳೆ

ಇತ್ತೀಚಿನ ಸುದ್ದಿ

ಜಾಹೀರಾತು