1:21 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ದ್ವಿತೀಯ ಪಿಯು ಪರೀಕ್ಷೆ ರದ್ದತಿ; ರಿಪಿಟರ್ಸ್ ಮತ್ತು  ಖಾಸಗಿ ವಿದ್ಯಾರ್ಥಿಗಳ ಗೊಂದಲ ನಿವಾರಿಸಿ: ಎನ್ ಎಸ್ ಯುಐ ಆಗ್ರಹ

09/06/2021, 15:56

ಮಂಗಳೂರು(reporterkarnataka news):ರಾಜ್ಯ ಸರಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿದ್ದು, ಅದರ ನೀತಿ-ನಿಯಮ ಗೊಂದಲ ಉಂಟು ಮಾಡಿದೆ. ಪುನಾವರ್ತನೆ ಮತ್ತು ಖಾಸಗಿಯಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಸರಕಾರ ಇನ್ನೂ ಕೂಡ ಸ್ಪಷ್ಟ ನಿಲುವನ್ನು ತಾಳದಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲ ಉಂಟು ಮಾಡಿದೆ ಎಂದು ರಾಜ್ಯ ಎನ್ ಎಸ್ ಯುಐ ಪ್ರಧಾನ ಕಾರ್ಯದರ್ಶಿ ಮನೀಶ್ ಜಿ. ರಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 10ನೇ ತರಗತಿಯ ಪರೀಕ್ಷೆ ವಿಷಯದಲ್ಲಿ ಯೂ ಸರ್ಕಾರ ಅನೇಕ ಗೊಂದಲಕಾರಿ ನಿಲುವುಗಳನ್ನು ಕೈಗೊಳ್ಳುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಕತ್ತಲಲ್ಲಿದೆ. ಆದಷ್ಟು ಶೀಘ್ರದಲ್ಲಿ ಈ ಎರಡು ವಿಚಾರದಲ್ಲಿ  ಸರ್ಕಾರ ಕೂಡಲೇ ಸರಿಯಾದ ನಿಲುಗಳನ್ನು ಕೈಗೊಂಡು ವಿದ್ಯಾರ್ಥಿಗಳನ್ನು ಉಳಿಸಬೇಕು ಎಂದು ಆಗ್ರಹಿಸಿದರು.

ಕಳೆದ ಒಂದು ವರ್ಷಗಳಿಂದ ಯಾವುದೇ ವರ್ಗದ ವಿದ್ಯಾರ್ಥಿ ವೇತನವನ್ನು ನೀಡಲಾಗಿಲ್ಲ. ವಿದ್ಯಾರ್ಥಿ ವೇತನವನ್ನೇ ಆಧರಿಸಿ ಶಿಕ್ಷಣ ಮುಂದುವರಿಸಿರುವ ಲಕ್ಷಾಂತರ ವಿದ್ಯಾರ್ಥಿಗಳು ಇದರಿಂದ ಕಂಗಾಲಾಗಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಕಾಲೇಜು ಶುಲ್ಕವನ್ನು ಪಾವತಿಸುವಂತೆ ಒತ್ತಡವನ್ನು ಹೇರುತ್ತಿದ್ದಾರೆ. ಆನ್ ಲೈನ್ ತರಗತಿಯ ಲಿಂಕ್ ಗಳನ್ನು ಕೂಡ ನೀಡಲಾಗುತ್ತಿಲ್ಲ. ಸರ್ಕಾರ 2 ವರ್ಷದ  ವಿದ್ಯಾರ್ಥಿ ವೇತನವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.

ದ.ಕ.ಜಿಲ್ಲಾ ಎನ್ ಎಸ್ ಯುಐ ಅಧ್ಯಕ್ಷ ಸವಾದ್ ಸುಳ್ಯ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಕಳೆದ ಸೆಮಿಸ್ಟರ್ ನ ಪರೀಕ್ಷೆಗಳನ್ನು ನಡೆಸದೆ ಮುಂದಿನ ಸೆಮಿಸ್ಟರ್ ನ ತರಗತಿಗಳನ್ನು ಆನ್ ಲೈನ್ ಮುಖಾಂತರ ಪ್ರಾರಂಭಿಸಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಓರ್ವ ವಿದ್ಯಾರ್ಥಿ ಎರಡೂ ಸೆಮಿಸ್ಟರ್ಗಳ ಪರೀಕ್ಷೆಯನ್ನ ಒಂದೇ ಸಮಯದಲ್ಲಿ ಬರೆಯುವಂತಾಗಿದ್ದು, ಕಳೆದ ಪದವಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸಬೇಕು.

ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವ್ಯಾಕ್ಸಿನೇಷನ್ ಕಾಲೇಜು ಮಟ್ಟದಲ್ಲಿ ನೀಡಬೇಕಾಗಿ ಒತ್ತಾಯಿಸಿದರು.

ಎನ್ ಎಸ್ ಯುಐ ವಿಟಿಯು ಉಸ್ತುವಾರಿ ಅನ್ವೀತ್ ಕಟೀಲ್, ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಅಫೀದ್, ಜಿಲ್ಲಾ ಉಪಾಧ್ಯಕ್ಷ ನಿಖಿಲ್ ಪೂಜಾರಿ, ವರುಣ್ ಕುಮಾರ್, ಶಫೀಕ್, ಅಬ್ದುಲ್ ರಾಝೀ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು