6:17 PM Monday21 - July 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

ಇಬ್ಬರು ಬ್ಯಾಗ್ ನೊಂದಿಗೆ ಓಡಾಡುತ್ತಿರುವ ವೀಡಿಯೋಗೂ ಆಟೋ ಸ್ಫೋಟಕ್ಕೂ ಸಂಬಂಧವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

22/11/2022, 23:15

ಮಂಗಳೂರು(reporterkarnataka com): ಇಬ್ಬರು ವ್ಯಕ್ತಿಗಳು ಬ್ಯಾಗ್ ಹಿಡಿದು ಓಡಾಡುತ್ತಿರುವ ದೃಶ್ಯಕ್ಕೂ ನಾಗೂರಿಯಲ್ಲಿ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಡಿಯೋವೊಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್‌ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರು ನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ‌ಇಬ್ಬರು ವ್ಯಕ್ತಿಗಳು ಓಡಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದನ್ನು ಸ್ಪೋಟ ಪ್ರಕರಣದ ಆರೋಪಿ ಮತ್ತು ಆತನೊಂದಿಗೆ ಇನ್ನೊಬ್ಬ ವ್ಯಕ್ತಿ ಇದ್ದ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಅಸಲಿಗೆ ಆ ವೀಡಿಯೋಗೂ, ಘಟನೆಗೂ ಯಾವುದೇ ಸಂಬಂಧವಿಲ್ಲ. ಅದು ರೈಲು ನಿಲ್ದಾಣದ ಬಳಿಯ ಸ್ಥಳವಾದ್ದರಿಂದ ಯಾರೋ ಪ್ರಯಾಣಿಕರು ಓಡಾಡುತ್ತಿರುವುದನ್ನು ಘಟನೆಯೊಂದಿಗೆ ತಳುಕು ಹಾಕಲಾಗುತ್ತಿದೆ. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸಾರ್ವಜನಿಕರು ಪರಿಶೀಲಿಸದ ಇಂತಹ ವೀಡಿಯೋಗಳನ್ನು ನಂಬಬಾರದು ಎಂದವರು ಮನವಿ ಮಾಡಿದ್ದಾರೆ.

ಈ ಘಟನೆ ಬಳಿಕ ಮಂಗಳೂರು ನಗರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ಇಡಲಾಗುತ್ತಿದೆ. ಧಾರ್ಮಿಕ ಕೇಂದ್ರ, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಶ್ವಾನ ದಳದಿಂದಲೂ ಪರಿಶೀಲನೆ ನಡೆಯಲಿದೆ ಎಂದವರು ತಿಳಿಸಿದರು.
ಘಟನೆಯಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗೆ ಗಂಭೀರ ಗಾಯಗಳಾಗಿರುವುದರಿಂದ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಆತ ಮಾತನಾಡುವ ಪರಿಸ್ಥಿತಿಯಲ್ಲಿಲ್ಲದ ಕಾರಣ ಏನೂ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಆತ ಚೇತರಿಸಿಕೊಂಡಿರುವ ಬಗ್ಗೆ ವೈದ್ಯರಿಂದ ಅಧಿಕೃತಗೊಂಡ ಬಳಿಕ ಆತನ ವಿಚಾರಣೆ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು